ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಯಾವ ನಿಯಮಾವಳಿಗಳ ಆಧಾರದಲ್ಲಿ ತನಿಖೆ ನಡೆಸಬೇಕು ಎಂಬ ಜಿಜ್ಞಾಸೆ ಉಂಟಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ದಂಡ ಸಂಹಿತೆ (CRPC) ಅಡಿ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ ನೀಡಿದೆ. ಆದರೆ ಕೇಂದ್ರ ಸರ್ಕಾರ ಸಿ ಆರ್ ಪಿ ಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆಯನ್ನು ಜಾರಿಗೆ ತಂದಿದೆ. ಅಲ್ಲದೆ ಇನ್ನು ಮುಂದೆ ಎಲ್ಲಾ ಪ್ರಕರಣಗಳನ್ನು ಸಿಆರ್ ಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಅಧಿ ಸೂಚನೆ ಮೂಲಕ ತಿಳಿಸಿದೆ.
ಆದರೆ ಜನಪ್ರತಿನಿಧಿಗಳ ನ್ಯಾಯಾಲಯ ಈ ಪ್ರಕರಣ ಕುರಿತಂತೆ ಸಿ ಆರ್ ಪಿ ಸಿ ಅಡಿಯಲ್ಲಿ ತನಿಖೆಗೆ ಆದೇಶಿಸಿದೆ. ಇದು ತನಿಖಾ ಅಧಿಕಾರಿಗಳನ್ನು ಜಿಜ್ಞಾಸೆಯಲ್ಲಿ ಬೀಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಪ್ರಕರಣವನ್ನು ಯಾವ ನಿಯಮಗಳ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಮತ್ತೊಮ್ಮೆ ನ್ಯಾಯಾಲಯದ ಅಭಿಪ್ರಾಯ ಕೇಳುವ ಕುರಿತಂತೆ ಚಿಂತನೆ ನಡೆಸಿದ್ದಾರೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿರುವಂತೆ ಸಿಆರ್ಪಿಸಿ ಅಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಹೊಸದಾಗಿ ಜಾರಿಯಲ್ಲಿರುವ ಬಿಎನ್ಎಸ್ಎಸ್ ನಿಯಮಗಳ ಅಡಿ ಪ್ರಕರಣ ದಾಖಲಿಸಲು ಆದೇಶಿಸಿದ್ದರೆ ಸೂಕ್ತವಾಗುತ್ತಿತ್ತು ಎಂದರು.
ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸಿಆರ್ಪಿಸಿ 156/3ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆದೇಶಿಸಿದೆ. ಆದರೆ ಈಗ ಸಿಆರ್ಪಿಸಿ ಅಸ್ತಿತ್ವದಲ್ಲಿ ಇಲ್ಲ ಎಂದರು.
ಬಿಎನ್ಎಸ್ಎಸ್ ನಿಯಮಗಳು 2024ರ ಜುಲೈ 1 ರಿಂದಲೂ ಚಾಲ್ತಿಯಲ್ಲಿವೆ. ಅದರ ಅಡಿ ಪ್ರಕರಣ ದಾಖಲಿಸಿ ಕಾನೂನು ಪ್ರಕ್ರಿಯೆ ಮುಂದುವರಿಸಲು ಅವಕಾಶವಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಕುರಿತು ಚರ್ಚೆಗಳು ನಡೆಯುತ್ತಿವೆ. ಕಾನೂನು ತಜ್ಞರ ತಂಡ ಪರಿಶೀಲನೆ ನಡೆಸಿ ಯಾವ ರೀತಿಯ ವರದಿ ನೀಡಲಿದೆ ಎಂದು ಕಾಯುತ್ತಿದ್ದೇವೆ. ವರದಿ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ನ ವಿಭಾಗೀಯ ಪೀಠ, ಸುಪ್ರೀಂ ಕೋರ್ಟ್ ಸೇರಿ ಬೇರೆಬೇರೆ ಹಂತಗಳಲ್ಲಿ ಪ್ರಶ್ನಿಸಲು ಅವಕಾಶ ಇದೆ. ಹೈಕೋರ್ಟ್ನ ತೀರ್ಪಿನಿಂದ ನಮಗೆ ಸಮಾಧಾನವಾಗಿಲ್ಲ. ನಾವು ನೀಡಿದ ಸಾಕ್ಷ್ಯಗಳು, ಪುರಾವೆಗಳನ್ನು ತೀರ್ಪು ನೀಡುವ ವೇಳೆ ಪರಿಗಣಿಸಲಾಗಿಲ್ಲ. ಹೀಗಾಗಿ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.




