ಮಹಿಳೆಯರ ಕುರಿತು ಕೀಳುಮಟ್ಟದ ಭಾಷೆ ಬಳಕೆ: ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ

2 years ago

ಬೆಂಗಳೂರು: ಮಹಿಳೆಯರ ಕುರಿತು ಕೀಳುಮಟ್ಟದ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪಿಸಿಸ ಕಾಂಗ್ರೆಸ್ ಭವನ ಗಾಂಧಿ ಪ್ರತಿಮೆ ರೇಸ್ ಕೋರ್ಸ್ ರಸ್ತೆ ಬೆಂಗಳೂರುನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರ ನೀಡುತ್ತಿರುವ 5 ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂ.ಇ.ಐ.ನಿಗಮದ ಅಧ್ಯಕ್ಷ ಎಸ್.ಮನೋಹರ್, ಬಿಬಿಎಂಪಿ ಮಾಜಿ ಸದಸ್ಯ ಉದಯ್ ಶಂಕರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಆನಂದ್, ಪ್ರಕಾಶ್, ಹೇಮರಾಜ್, ಚಿಕ್ಕಣ್ಣ, ನಂದಕುಮಾರ್ ಜಯಶ್ರೀ, ಪ್ರೇಮಲತಾ, ಪುಷ್ಪ, ಮಾಧವಿ, ಪುಟ್ಟರಾಜು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಮಾತನಾಡಿದ ಎಸ್.ಮನೋಹರ್, ಕಾಂಗ್ರೆಸ್ ಪಕ್ಷದ ಸರ್ಕಾರ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಪೂರೈಸಿದ್ದಾರೆ. ರಾಜ್ಯದ ಪ್ರತಿ ಕುಟುಂಬಗಳಲ್ಲಿ ಗ್ಯಾರಂಟಿ ಯೋಜನೆಯ ಅರ್ಹ ಫಲಾನುಭವಿಗಳು ಇದ್ದಾರೆ ಎಂದರು.

ಗ್ಯಾರಂಟಿ ಯೋಜನೆಯಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಹಿಳೆಯರು ಸ್ವಾಭಿಮಾನದ ಬದುಕು ಸಾಗಿಸಲು ಮನೆಯ ಯಾಜಮಾನಿಗೆ 2000, ಅನ್ನಭಾಗ್ಯ ಮತ್ತು ಮಹಿಳೆಯರಿಗೆ ಉಚಿತ ಬಸ್, 200 ಯೂನಿಟ್ ವಿದ್ಯುತ್ ಉಚಿತ ಯೋಜನೆಗಳು ಮಹಿಳೆಯರ ಸ್ವಾವಂಲಬಿ ಜೀವನಕ್ಕೆ ಅನುಕೂಲವಾಗಿದೆ. ಆರ್ಥಿಕವಾಗಿ ದುರ್ಬಲರಾದ ಕುಟುಂಬಗಳು ಇಂದು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.

ಜೆಡಿಎಸ್ ಪಕ್ಷದ ಗುರುತು ರೈತ ಮಹಿಳೆ ಮತ್ತು ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಕಾರ್ಯನಿರ್ವಹಿಸಿದ್ದಾರೆ . ಆದರೆ ತುಮಕೂರು ಪ್ರಚಾರ ಸಮಯದಲ್ಲಿ ಮಹಿಳೆಯರ ಕುರಿತು ಕೀಳುಮಟ್ಟದ ಭಾಷೆ ಬಳಸಿರುವುದು ಶೋಚನೀಯ ಸಂಗತಿ ಎಂದರು.

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿರವರು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಾಣುವ ಭೀತಿ ಇರುವುದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯ ಮಹಿಳೆಯರು ತಕ್ಕ ಉತ್ತರ ನೀಡಬೇಕು. ಇವರಿಗೆ ಪಾಠ ಕಲಿಸುವ ಸಮಯ ಬಂದಿದೆ ಎಂದರು.

Leave a Reply