ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಮತ್ತು ರಾಜ್ಯದ ತೆರಿಗೆ ಪಾಲು ನಿಗದಿ ಪಡಿಸುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಇದೀಗ ಚೊಂಬು ಪ್ರತಿಭಟನೆ ಮೂಲಕ ಗಮನ ಸೆಳೆದಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿಯ ಸಮಯದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಚೊಂಬುಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ಆಯೋಜಿಸಿದ್ದ ಬೆಂಗಳೂರಿನ ಅರಮನೆ ಮೈದಾನದ ಸಮೀಪದ ಮೇಖ್ರಿ ವೃತ್ತದಲ್ಲಿ ಎಐಸಿಸಿ ನಾಯಕ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅನೇಕ ಮುಖಂಡರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವೇಳೆ ಮಾತನಾಡಿದ ಸುರ್ಜೇವಾಲ, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯಯುತ ತೆರಿಗೆ ಪಾಲು ನೀಡುವ ಬದಲಿಗೆ ಚೊಂಬು ನೀಡಿದೆ. ಯಾಕೋ ಮಾಡಿಲ್ಲ ವಸೂಲಿಯಾಗುವ ತೆರಿಗೆಯಲ್ಲಿ 13 ರಷ್ಟು ಮಾತ್ರ ವಾಪಸ್ ನೀಡಲಾಗುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದರು.
ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ಬರಗಾಲ ಪೀಡಿತ ಜನರು ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ರಾಜ್ಯ ಸರ್ಕಾರ ಇವರಿಗೆ ನೆರವು ನೀಡುವ ದೃಷ್ಟಿಯಿಂದ 18,400 ಕೋಟಿ ಪರಿಹಾರ ಕೇಳಿದರೆ ಸರ್ಕಾರ ಯಾವುದೇ ಚಕಾರ ಎತ್ತಿಲ್ಲ. ರೈತರ ಆದಾಯ ದ್ವಿಗುಣ ಗೊಳಿಸುತ್ತೇವೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೂ ಚೊಂಬು ನೀಡಿದೆ ಎಂದರು.




