ಬೆಂಗಳೂರು: ರಾಜ್ಯದಲ್ಲಿ ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಕಾರ್ಮಿಕ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಇಂದಿನಿಂದ ವಿದ್ಯುತ್ ಹಾಲು ಮಾರಾಟ ದರ ಹೆಚ್ಚಳದ ಜೊತೆಗೆ ಬೆಂಗಳೂರಿನಲ್ಲಿ ಕಸಕ್ಕೂ ಹಾಕುತ್ತಿರುವ ಸೆಸ್ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಿನಕ್ಕೊಂದು ಸುಳ್ಳು, ತಿಂಗಳಿಗೊಂದು ದರ ಏರಿಕೆ, ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಯುತ್ತಿದೆ. ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹೊಂದಲಾಗಿದೆ ಎಂದಿದ್ದಾರೆ.
ನೀರು, ಮೆಟ್ರೋ ರೈಲು, ಬಸ್ ಟಿಕೆಟ್, ಹಾಲು , ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ ಎಂದು ದರ ಏರಿಕೆ ಕುರಿತು ಆರೋಪಿಸಿದ್ದಾರೆ.
ದರ ಏರಿಕೆಗೆ ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ: ಜನರ ಲೂಟಿ ಮಾಡುವುದಷ್ಟೇ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್, ಕಾಂಗ್ರೆಸ್ ಕಂಪನಿ ಸರಕಾರದ ಉದ್ದೇಶ ಎಂದಿದ್ದಾರೆ.



