ಚಾಮರಾಜನಗರ: ನನ್ನ ಮತ್ತು ಚಾಮರಾಜನಗರದ ಜನರ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿಯದ್ದು. ಇಲ್ಲಿನ ಜನರ ಪ್ರೀತಿ – ಅಭಿಮಾನಕ್ಕೆ ನಾನು ಚಿರಋಣಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಇಂದಿನ ಸಮಾರಂಭದಲ್ಲಿ ಕೃತಜ್ಞತೆ ಸಲ್ಲಿಸಿ, ಮಾತನಾಡಿದ ಅವರು, ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ, ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.
ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಆಗಿದೆ ಎಂದರು.
ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ (ಬಿಜೆಪಿಯವರು) ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು ಎಂದರು.
ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.
ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ ಎಂದರು.
ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ ಎಂದರು.




