ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್ ನೇತೃತ್ವದಲ್ಲಿ ಮನೋರಾಯನ ಪಾಳ್ಯದಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಮತ್ತು ಸಾರ್ವಜನಿಕರಿಗೆ ಜೀವರಕ್ಷಕ ಕೋವಿಡ್-19 ಲಸಿಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿರೋಧ ಪಕ್ಷದ ಮಾಜಿ ನಾಯಕ ಅಬ್ದುಲ್ ವಾಜಿದ್ ಹೇಳಿದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರ, ಮನೋರಾಯನ ವಾರ್ಡ್-33ರ ಚಾಮುಂಡಿನಗರ, ಶ್ರೀ ಭಾರತಿ ಸ್ಕೂಲ್ ಅವರಣದಲ್ಲಿ ಉಚಿತ ಕೋವಿಡ್-19 ಪರೀಕ್ಷೆ ಮತ್ತು ಕೋವಿಡ್ ಲಸಿಕಾ ಕೇಂದ್ರ ಹಾಗೂ ಕೋವಿಡ್ ಕುರಿತು ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾಡಿದ ಅವರು, ಈಗಾಗಲೇ ಭಾರತ ದೇಶದಲ್ಲಿ 30 ಕೋಟಿ ಜನ ವ್ಯಾಕ್ಸಿನ್ ಪಡೆದಿರುತ್ತಾರೆ. ಕೊರೋನ ಮೂರನೇ ಅಲೆಯಿಂದ ಜೀವ ರಕ್ಷಣೆ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಿ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಕರೆ ನೀಡಿದರು.




