ಕೈಯಲ್ಲಿ ಸಂವಿಧಾನ ಹಿಡಿದು ಓಡಾಡುವ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ದೇಶದ್ರೋಹದ ಕೃತ್ಯ: ಪ್ರಹ್ಲಾದ್ ಜೋಷಿ

1 year ago

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದು ಓಡಾಡುವ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ದೇಶದ್ರೋಹದ ಕೃತ್ಯ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲವನ್ನೇ ಸೃಷ್ಟಿಸಿದೆ.

ಡಿಸೆಂಬರ್ 26ರಂದು ಎಐಸಿಸಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಗಾಂಧೀಜಿಯವರು ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಅಳವಡಿಸಲಾಗಿದ್ದ ಕೆಲವು ಬ್ಯಾನರ್ ಗಳಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಮುದ್ರಿಸಲಾಗಿತ್ತು.

ಇದರ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರಹ್ಲಾದ್ ಜೋಷಿ, ಮೇಲಿನ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡಿದ್ದರು.

ಭಾರತದ ಮುಕುಟಮಣಿ, ಭಾರತದ ಹಮ್ಮೆ ಕಾಶ್ಮೀರದಲ್ಲಿ ಶಾಂತಿಯನ್ನು ಪಸರಿಸಿ, ಲಕ್ಷಾಂತರ ಜನ ಪ್ರವಾಸಿಗರ ಆಕರ್ಷಣೀಯ ಪ್ರದೇಶವನ್ನಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭವ್ಯ ಭಾರತ ಸೃಷ್ಟಿಸಿದ್ದಾರೆ ಎಂದು ಹೇಳಿದ್ದರು.

ಆದರೆ, ಗಾಂಧಿ ಭಾರತದ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ, ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು, ಭಾರತದ ನಕಾಶೆಯನ್ನು ತಿರುಚಿರುವುದು ದೇಶದ್ರೋಹ. ಕೈಯಲ್ಲಿ ಸಂವಿಧಾನ ಹಿಡಿದು ಓಡಾಡುವ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ದೇಶದ್ರೋಹದ ಕೃತ್ಯ ಎಂದಿದ್ದರು.

ದೇಶದ ಜನ ಕಾಂಗ್ರೆಸ್ ಪಕ್ಷದ ಇಂತಹ ನಿಲುವುಗಳನ್ನು ಎಂದಿಂಗೂ ಸ್ವೀಕರಿಸುವುದಿಲ್ಲ. ನಾಚಿಕೆ ಲಜ್ಜೆಯನ್ನು ಬಿಟ್ಟ ಕಾಂಗ್ರೆಸ್ ಪಕ್ಷಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು.

ಸದರಿ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. “ಕೈಯಲ್ಲಿ ಸಂವಿಧಾನ ಹಿಡಿದು ಓಡಾಡುವ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ದೇಶದ್ರೋಹದ ಕೃತ್ಯ” ಎಂಬ ಹೇಳಿಕೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟದ ಪ್ರಶ್ನೆಗಳು ಎದ್ದಿವೆ. “ಕೈಯಲ್ಲಿ ಸಂವಿಧಾನ ಹಿಡಿಯುವುದು ಯಾವ ರೀತಿ ದೇಶದ್ರೋಹ?” ಎಂಬ ಪ್ರಶ್ನೆಯನ್ನು ಜೋಷಿಯವರಿಗೆ ಕೇಳಲಾಗುತ್ತಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಸಂವಿಧಾನ ಹಿಡಿದು ಓಡಾಡುವುದು ನಿಮಿಗೆ ದೇಶದ್ರೋಹ ಆಗುವುದಾದರೆ ನಮಗೆ ಅದುವೇ ದೇಶಪ್ರೇಮ Pralhad Joshi  ಅವರೇ ಎಂದಿದ್ದಾರೆ.

ಸಂವಿಧಾನ, ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ದ್ವೇಷ,ತಾತ್ಸಾರ-ಮನುಸ್ಮೃತಿಯ ಮೇಲೆ ಆಂತರ್ಯದ ಪ್ರೀತಿ. ನಾವು ಸಂವಿಧಾನ ಹಿಡಿದು ಓಡಾಡುತ್ತೇವೆ, ಧೈರ್ಯ ಇದ್ದರೆ ಬಹಿರಂಗವಾಗಿ ಮನುಸ್ಮೃತಿ ಹಿಡಿದು ಓಡಾಡಿ ಎಂದಿರುವ ಅವರು, #ಸಂವಿಧಾನV/Sಮನುಸ್ಮೃತಿ ಹ್ಯಾಷ್ ಟ್ಯಾಗ್ ಬಳಸಿ ಟೀಕಿಸಿದ್ದಾರೆ.

Leave a Reply