ಬಳ್ಳಾರಿ \ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮೂರಕ್ಕೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ವಿಜಯ ಸಾಧಿಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಭಾರಿ ಮುಖಭಂಗ ಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗಣಿನಾಡು ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲ್ಲುವ ಮೂಲಕ ಇದು ಪಕ್ಷದ ಭದ್ರಕೋಟೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಸಚಿವ ಸಂತೋಷ್ಲಾಡ್, ಸಂಸದ ಇ.ವಿ.ತುಕಾರಾಮ್ ಅವರ ಸಂಘಟಿತ ಹೋರಾಟ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದೆ.
ಕ್ಷೇತ್ರದಲ್ಲಿ ಮುಡಾ ಹಗರಣ ಹಾಗೂ ಲಿಂಗಾಯತ ಕ್ರೋಢೀಕರಣಕ್ಕೆ ಯತ್ನಿಸಿದ್ದ ಬಿಜೆಪಿ ಕಾರ್ಯತಂತ್ರ ಕೈ ಹಿಡಿದಿಲ್ಲ. ವಿಜೇತ ಅನ್ನಪೂರ್ಣ ಅವರು 93,616, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 83,967 ಮತಗಳನ್ನು ಪಡೆದಿದ್ದು, ಸುಮಾರು 9,649 ಮತಗಳ ಅಂತರದಿಂದ ಕೈ ಅಭ್ಯರ್ಥಿ ಗೆಲುವು ಸಾಧಿಸಿದರು. ಆರಂಭದಿಂದಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಅನ್ನಪೂರ್ಣ ಮುನ್ನಡೆ ಸಾಧಿಸಿದ್ದರು.




