ಬೆಂಗಳೂರು: ಅಧಿಕಾರದ ಮದದಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರದ ದಮನಕಾರಿ ನಡೆಯು ಹಿಟ್ಲರ್ ಆಡಳಿತವನ್ನೂ ಮೀರಿಸುವಂತಿದೆ ಎಂದು ಬಿಜೆಪಿ ಆರೋಪಿಸಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಅಕ್ರಮವಾಗಿ ಕ್ವಾರಿ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದ ಅಸಮರ್ಥ ಸರ್ಕಾರ, ಬಿಜೆಪಿ ಯುವ ಮುಖಂಡ ಶಶಿರಾಜ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಿದೆ. ಈ ಬಂಧನ ವಿರೋಧಿಸಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಪ್ರತಿಭಟನೆ ನಡೆಸಿದ್ದಕ್ಕೆ ನೀತಿ ಸಂಹಿತೆ ನೆಪದಲ್ಲಿ ಸರ್ಕಾರ ಬಂಧನಕ್ಕೆ ಮುಂದಾಗಿದ್ದು ಖಂಡನೀಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದೆ.
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಅಡ್ಡಿ ಬಾರದ ನೀತಿ ಸಂಹಿತೆ, ಅಧಿಕಾರದ ದುರ್ಬಳಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆಗೆ ಇಳಿದಾಗ ನೀತಿ ಸಂಹಿತೆ ಅಡ್ಡಿ ಬರುವುದ್ಯಾಕೆ? ಇದು ಪ್ರತಿಭಟಿಸುವ ಹಕ್ಕನ್ನು ಕಿತ್ತುಕೊಳ್ಳುವ ಸರ್ವಾಧಿಕಾರವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕರುನಾಡು ಉಗ್ರರ ಬೀಡಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಅಸಮರ್ಥ ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ. ಆದರೆ, ಅನ್ಯಾಯದ ಕುರಿತು ಧ್ವನಿ ಎತ್ತಿದ್ದಕ್ಕೆ ಬಿಜೆಪಿ ಕಾರ್ಯಕರ್ತರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸಿ, ಬಂಧಿಸಿರುವುದು ಅಕ್ಷಮ್ಯ ಎಂದಿದೆ.




