ಬೆಂಗಳೂರು: ನಾಡಿನ ಕಲೆ, ಸಂಸ್ಕೃತಿ, ಕಲಾವಿದರು ಅಂದರೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ವಿಶ್ವ ವಿಖ್ಯಾತ ಸರೋದ್ ವಾದಕ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ವಿಧಿವಶರಾಗಿ ಐದು ತಿಂಗಳು ಕಳೆದರೂ ಅವರ ವೈದ್ಯಕೀಯ ಚಿಕಿತ್ಸಾ ವೆಚ್ಚದ ಕಡತವನ್ನ ವಿಲೇವಾರಿ ಮಾಡದೆ ಇನ್ನೂ ಬಾಕಿ ಉಳಿಸಿಕೊಂಡಿದೆ ಈ ಲಜ್ಜೆಗೆಟ್ಟ @INCKarnataka ಸರ್ಕಾರ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಈ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಾನ್ಯ ಸಚಿವ ಶ್ರೀ @CMahadevappa ನವರೇ, ಪಂಡಿತ್ ತಾರಾನಾಥ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿದೆ ಎಂದು ಆಗ ಘೋಷಣೆ ಮಾಡಿದ್ದಿರಲ್ಲ, ನುಡಿದಂತೆ ನಡೆಯುವ ನಿಮ್ಮ ಮುಖ್ಯಮಂತ್ರಿಗಳ ಬದ್ಧತೆ ಬರೀ ಘೋಷಣೆಗೆ ಮಾತ್ರ ಸೀಮಿತಾನಾ? ಎಂದು ಪ್ರಶ್ನಿಸಿದ್ದಾರೆ.
ಪಂಡಿತ್ ತಾರಾನಾಥ್ ಅವರು ಕಳೆದ ದಸರಾ ವೇಳೆ ತಮ್ಮ ಸರ್ಕಾರದ ಭ್ರಷ್ಟಾಚಾರ, ಕಮಿಷನ್ ಕಾಂಡವನ್ನ ಬಯಲು ಮಾಡಿದ್ದರು ಎಂದು ಅವರ ಕುಟುಂಬದ ವಿರುದ್ಧ ಈಗ ಸೇಡು ತೀರಿಸಿಕೊಳ್ಳುತ್ತಿದ್ದೀರಾ? ಎಂದಿದ್ದಾರೆ.
ನಾಡಿನ ಕಲಾವಿದರ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದಿದ್ದರೆ, ಅವರ ಚಿಕಿತ್ಸಾ ವೆಚ್ಚವನ್ನು ಅವರು ಕೇಳುವ ಮುನ್ನವೆ ತಾವೇ ಖುದ್ದಾಗಿ ಹೋಗಿ ಕೊಟ್ಟು ಬರಬೇಕಿತ್ತು. ಆದರೆ ಅವರ ಕಡತ ನಾಲ್ಕು ತಿಂಗಳಿಂದ ವಿಲೇವಾರಿ ಮಾಡದೆ ಕುಟುಂಬಸ್ಥರಿಗೆ ಅವಮಾನ ಮಾಡುತ್ತಿದ್ದೀರಲ್ಲ, ಇದೇನಾ ಕನ್ನಡ ನಾಡು, ನುಡಿ, ಸಂಸ್ಕೃತಿಗೆ @INCKarnataka ಸರ್ಕಾರ ನೀಡುವ ಗೌರವ? ಎಂದಿದ್ದಾರೆ.


