ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ @BZZameerAhmedK ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ @BJP4Karnataka ಸಂಪೂರ್ಣ ಬೆಂಬಲ ನೀಡಲಿದೆ.
ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ @siddaramaiah ನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




