2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಯತೀಂದ್ರ ಸಿದ್ದರಾಮಯ್ಯ

4 years ago

ಮೈಸೂರು: ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಪಕ್ಷಾತೀತವಾಗಿ ರಾಜ್ಯದ ಅಭಿವೃದ್ದಿಗೆ ಅನುದಾನ ನೀಡಿದರು ಎಂದು ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರದ ಕೀಳನಪುರ ಗ್ರಾಮ ಪಂಚಾಯಿತಿ ಮತ್ತು ಮಾಧವಗೆರೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜಾ ಕಾರ್ಯಕ್ರಮ,ರಸ್ತೆ ಕಾಮಗಾರಿ ಹಾಗೂ ಒಂಟಿ ಮನೆ ಫಲಾನುಭವಿಗಳಿಗೆ ಆದೇಶ ಪತ್ರವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದರು.

ಜನತೆಗೆ ನೀಡಿದ 165 ಭರವಸೆಗಳನ್ನು ಪೂರೈಸಿದ ಏಕೈಕ ಸರ್ಕಾರ ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಇಂದಿನ ಬಿ.ಜೆ.ಪಿ. ಸರ್ಕಾರ ಶಾಸಕರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುತ್ತಿಲ್ಲ. ರಾಜ್ಯ ಸರ್ಕಾರ ಜನವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಆಡಳಿತ ನಡೆಸುತ್ತಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಊರಿನ ಮುಖಂಡರು, ಕಾರ್ಯಕರ್ತರು, ಎಮ್.ಶಿವರಾಜು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ 15 ಲಕ್ಷ ರೂಪಾಯಿ ಅನುದಾನ ನೀಡಲಾಯಿತು.

Leave a Reply