ಚಿಕ್ಕಮಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮಹಿಳೆಯರು ಹಾಗೂ ಬಡವರ ಮೇಲೆ ಕಾಳಜಿ ಹೊಂದಿರುವ ಪಕ್ಷ ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಚಿಕ್ಕಮಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ವತಿಯಿಂದ ಕುವೆಂಪು ಕಲಾಮಂದಿರದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.
ಕೊರೋನಾ ಬಂದು ಹೋದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿತು, ರೈತರು ಉಪಯೋಗಿಸುವ ರಸಗೊಬ್ಬರ, ಸಿಲಿಂಡರ್, ದಿನ ಬಳಕೆ ವಸ್ತುಗಳನ್ನು ಕೊಂಡುಕೊಳ್ಳುವುದೇ ದುಸ್ತರವಾಗಿತ್ತು. ಗೃಹಲಕ್ಷ್ಮಿ ಯೋಜನೆಯ ಮೂಲಕ ನೀಡುವ ಎರಡು ಸಾವಿರ ರೂಪಾಯಿ ಎಷ್ಟೋ ಕುಟುಂಬಗಳಿಗೆ ಅನುಕೂಲವಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯದ ಸಿಎಂ ಹಾಗೂ ಡಿಸಿಎಂ ಯಜಮಾನಿಯರು ಅಂತ ಹೆಸರಿಟ್ಟರು. ಈಗಾಗಲೇ 19 ತಿಂಗಳ ಹಣ ಫಲಾನುಭವಿಗಳಿಗೆ ತಲುಪಿದೆ. ಜನರಿಗೆ ಆಶ್ರಯ ನೀಡಿದ್ದು, ಆಸ್ಪತ್ರೆ, ಸ್ಕೂಲ್, ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರಗಳು. ಬಡವರಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದೇ ಕಾಂಗ್ರೆಸ್ ಎಂದರು.
ರಾಜಕೀಯವಾಗಿ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ್ದು ಚಿಕ್ಕಮಗಳೂರು ಜಿಲ್ಲೆ, ಐವತ್ತು ವರ್ಷಗಳ ಹಿಂದೆ ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಮಾಡಲಾಗುವುದು ಎಂದರು.
ಜನರ ಅಭಿವೃದ್ಧಿಗಾಗಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಹಾಕಲಾಗುತ್ತಿದೆ. ನೇರವಾಗಿ ಎರಡು ಸಾವಿರ ರೂ ಜನರಿಗೆ ತಲುಪುತ್ತಿದೆ. ಗ್ಯಾರಂಟಿ ಹೆಸರನ್ನು ಕೆಡಿಸಲು ವಿಪಕ್ಷಗಳಿಂದ ಅಪಪ್ರಚಾರ ನಡೆಯಿತು. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡುವ ಧೈರ್ಯ ಬಿಜೆಪಿಯವರಿಗಿಲ್ಲ, ಇದೇ ಬಿಜೆಪಿಯವರು ಮಹಾರಾಷ್ಟ್ರ, ದೆಹಲಿ, ಯುಪಿಯಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೂ ಒಂದು ಕಂತಿನ ಲಾಡ್ಲಿ ಬೆಹನ್ ಯೋಜನೆಯ ಹಣ ಕೊಟ್ಟಿಲ್ಲ ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ 160 ಅಂಗನವಾಡಿ ಶಿಕ್ಷಕಿಯರ ನೇಮಕ ಮಾಡಲಾಗಿದ್ದು, ಸಂಪೂರ್ಣ ಅಧಿಕಾರಿಗಳಿಂದ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲೇ 130 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲಾಗುವುದು. ಊಟದ ಜೊತೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ ಎಂದರು.



