ಕಾಂಗ್ರೆಸ್ ಸರ್ಕಾರದಿಂದ ವಿಪಕ್ಷ ಶಾಸಕರನ್ನು ಹತ್ತಿಕ್ಕುವ ಪ್ರಯತ್ನ!
ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಅವನ ತಾಯಿ ವಿಜಯಲಕ್ಷ್ಮೀ ಅವರು “ನಾನು ಬೈರತಿ ಬಸವರಾಜ್ ವಿರುದ್ಧ ದೂರು ಕೊಟ್ಟಿಲ್ಲ, ಪೊಲೀಸರೇ ಹೆಸರು ಹಾಕಿಕೊಂಡಿದ್ದಾರೆ” ಎಂದು ಹೇಳಿರುವುದು ಕಾಂಗ್ರೆಸ್ ಸರ್ಕಾರ ಈ ಪ್ರಕರಣದಲ್ಲಿ ಯಾವ ಕೀಳು ಮಟ್ಟಕ್ಕೆ ಇಳಿದು ರಾಜಕೀಯ ದ್ವೇಷ ಸಾಧಿಸುತ್ತಿದೆ ಎನ್ನುವುದನ್ನ ಸಾಬೀತುಪಡಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಮಾತೆತ್ತಿದರೆ ಸಿಬಿಐ, ಐಟಿ, ಇಡಿ ಮೂಲಕ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ @INCKarnataka ನಾಯಕರು, ದೂರಿನಲ್ಲಿ ಶಾಸಕರ ಹೆಸರೇ ಇಲ್ಲದಿದ್ದರೂ ಅವರ ಮೇಲೆ ದುರುದ್ದೇಶದಿಂದ ಎಫ್ಐಆರ್ ಹಾಕಿರುವುದು ಯಾವ ಸೀಮೆ ನ್ಯಾಯ?
ಸುಳ್ಳು ಕೇಸುಗಳನ್ನು ಹಾಕುವ ಮೂಲಕ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕಬಹುದು ಎಂಬ ಭ್ರಮೆಯಿಂದ ಕಾಂಗ್ರೆಸ್ ಸರ್ಕಾರ ಹೊರಬರಬೇಕು. ಬಿಜೆಪಿ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆರೋಪ ಇದ್ದರೆ ಕಾನೂನಿನ ಪ್ರಕಾರ ತನಿಖೆ ಮಾಡಲಿ. ನ್ಯಾಯಾಲಯದಲ್ಲಿ ಸಾಬೀತು ಮಾಡಲಿ. ಅದು ಬಿಟ್ಟು ಈ ರೀತಿ ದ್ವೇಷ ರಾಜಕಾರಣ ಮಾಡಿ ವಿಪಕ್ಷ ಶಾಸಕರನ್ನು ಟಾರ್ಗೆಟ್ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ, ಎಚ್ಚರಿಕೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




