ಬಸವಣ್ಣನವರ ನುಡಿದಂತೆ ನಡೆಯಬೇಕು ತತ್ವದಂತೆ ಕಾಂಗ್ರೆಸ್ ನಡೆದಿದೆ: ಡಿ.ಕೆ.ಶಿವಕುಮಾರ್

2 years ago

ಬೆಂಗಳೂರು: ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿಯನ್ನು ಪರಿಚಯಿಸಿದೆ ಎಂದು ಹೇಳಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಆಡಳಿತಾರೂಢ ಕಾಂಗ್ರೆಸ್ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರೆ, ವಿಪಕ್ಷಗಳು ರಾಜ್ಯಪಾಲರ ಮೂಲಕ ವಿಧಾನ ಮಂಡಲದಲ್ಲಿ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಕಿಡಿಕಾರಿವೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತಾಡಿದ ಡಿ.ಕೆ.ಶಿವಕುಮಾರ್, ಬಸವಣ್ಣನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ ಎಂದರು.

ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಮಾಡಲಾಗದ್ದನ್ನು ನಾವು ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಇದನ್ನು ವಿರೋಧ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ ಎಂದರು.

Leave a Reply