ಬೆಂಗಳೂರು: ಅಗ್ಗದ ಪ್ರಚಾರ ತಂತ್ರಗಳು ಮತ್ತು ಬಿಟ್ಟಿ ಭಾಗ್ಯಗಳ ಮೂಲಕ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆಯನ್ನು ಸಮಾಧಿ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಚಿವರಿಗೆ ತಮ್ಮ ಇಲಾಖೆಯ ಆರ್ಥಿಕ ಸ್ಥಿತಿಗತಿ ಅರ್ಥವಾಗಿಲ್ಲ. ಇಲಾಖೆ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಐಎಎಸ್ ಅಧಿಕಾರಿ ಉಪೇಂದ್ರ ತ್ರಿಪಾಠಿ ಅವರು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಂಸ್ಥೆಯನ್ನು ಲಾಭಕ್ಕೆ ತಂದರು. 700 ಕೋಟಿ ಮೊತ್ತವನ್ನು ಠೇವಣಿ ಇಟ್ಟಿದ್ದರು. ಅಂತಹ ಆಸ್ತಿಯನ್ನು ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ಡಿಸೆಂಬರ್ ಅಂತ್ಯಕ್ಕೆ ಸಾರಿಗೆ ಇಲಾಖೆಗೆ ಸರ್ಕಾರ 7,401 ಕೋಟಿ ಕೊಡಬೇಕಿದೆ. ಭವಿಷ್ಯನಿಧಿಗೆ 2,500 ಕೋಟಿ, ನಿವೃತ್ತ ನೌಕರರ ಬಾಕಿ 362 ಕೋಟಿ, ಸಿಬ್ಬಂದಿ ಬಾಕಿ ಪಾವತಿ, ಸರಬರಾಜುದಾರರ ಬಿಲ್, ಇಂಧನ ಬಾಕಿ ಸೇರಿ 1,000 ಕೋಟಿ, ರಜೆ ನಗದೀಕರಣ 700 ಕೋಟಿ, ಒಟ್ಟು ಸಾಲದ ಬಾಕಿ ಹೊಣೆಗಾರಿಕೆ ಸೇರಿ 5,614 ಕೋಟಿ ಆಗುತ್ತದೆ. ಬಾಕಿ ಮೊತ್ತಕ್ಕೆ ಶೇ 10.5 ಬಡ್ಡಿ ಕಟ್ಟಬೇಕಿದೆ ಎಂದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದ ಸಭೆಯಲ್ಲಿ 3,650 ಕೋಟಿ ಹೊರೆಯಾಗುತ್ತಿದೆ ಎಂದು ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ. ಶೇ 15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆ ನಿರ್ಣಯಿಸಿದೆ. ದರ ಪರಿಷ್ಕರಣೆಯಾದರೂ ನಿಗಮಗಳು1,800 ಕೋಟಿ ನಷ್ಟ ಅನುಭವಿಸುತ್ತದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ ಎಂದರು.




