ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯವೈಖರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಶಾಸಕರು ಹಾಗೂ ಮುಖಂಡರ ಬಾಯಿಗೆ ಹಾಕುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ದೆಹಲಿ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆ ಸೇರಿದಂತೆ ಹಲವರು ಮಾತನಾಡುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಖರ್ಗೆ ಅವರು, ಇವರ ಹೇಳಿಕೆಯಿಂದ ಪಕ್ಷ ಮತ್ತು ಸರ್ಕಾರಕ್ಕೆ ದೊಡ್ಡ ಮಟ್ಟದಲ್ಲಿ ಮುಜುಗರ ಉಂಟಾಗುತ್ತಿದೆ. ಇವರ ಹೇಳಿಕೆಗಳು ವಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಿ ಆರ್ ಪಾಟೀಲ್ ಅವರಂತೂ ಹಲವು ಬಾರಿ ಈ ರೀತಿಯ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ನಿಮಗೆ ಆತ್ಮೀಯರು. ಯಾಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ. ಹೀಗಾಗಿ ತಕ್ಷಣವೇ ಎಲ್ಲರನ್ನೂ ಕರೆದು ಮಾತುಕತೆ ನಡೆಸಬೇಕು. ಇನ್ನು ಮುಂದೆ ಯಾರೂ ಕೂಡ ಈ ರೀತಿಯಾಗಿ ಹೇಳಿಕೆ ನೀಡಿದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಇದಾದ ಬಳಿಕ ಸಿದ್ದರಾಮಯ್ಯ ಅವರು ರಣದೀಪ್ ಸುರ್ಜೇ ವಾಲ ಅವರೊಂದಿಗೆ ಮಾತುಕತೆ ನಡೆಸಿದ್ದು, ಅವರು ಕೂಡ ಶಾಸಕರ ಹೇಳಿಕೆಗಳ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಕ್ಷಣವೇ ಎಲ್ಲ ಶಾಸಕರ ಸಭೆ ಕರೆದು ಅಸಮಾಧಾನವನ್ನು ಶಮನಗೊಳಿಸಿ ಎಂದು ಸೂಚಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ.
ಮುಂದಿನ ವಾರ ತಾವು ಬೆಂಗಳೂರಿಗೆ ಆಗಮಿಸುತ್ತಿದ್ದು ಆ ವೇಳೆ, ಪಕ್ಷದ ಪದಾಧಿಕಾರಿಗಳ ಸಭೆ ನಡೆಯಲಿದೆ. ಇದೇ ಸಮಯದಲ್ಲಿ ಶಾಸಕರ ಸಭೆಯನ್ನು ಕರೆಯುವಂತೆ ಸೂಚಿಸಿದ್ದಾರೆ. ಈ ಸಭೆಯಲ್ಲಿ ಶಾಸಕರ ಅಹವಾಲು ಆಲಿಸಲಾಗುವುದು. ಅದಕ್ಕೆ ವ್ಯವಸ್ಥೆ ಮಾಡುವಂತೆ ಹೇಳಿದರು ಎಂದು ಉನ್ನತ ಮೂಲಗಳು ತಿಳಿಸಿವೆ.




