ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ

3 years ago

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ನೀಡಿರುವ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಆಪಾದಿಸಿದ್ದಾರೆ.

ವಿಧಾನಸಭೆಯ ಕಲಾಪದಲ್ಲಿ ಪಾಲ್ಗೊಂಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ,ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ನಡೆಸುವುದಾಗಿ ಕಾಂಗ್ರೆಸ್ ನಾಯಕರು ಹೇಳಿರುವುದರಲ್ಲಿ ಆಶ್ಚರ್ಯ ತರುವಂತದ್ದೇನಿಲ್ಲ. ಎಲ್ಲ ನಿರೀಕ್ಷಿತ. ಇದು ದ್ವೇಷದ ರಾಜಕಾರಣ ಎಂದು  ಹೇಳಿದರು.

 ಹಗರಣಗಳ ತನಿಖೆ ನಡೆಸುವ ಕಾಂಗ್ರೆಸ್ ನಾಯಕರ ಹೇಳಿಕೆ ದ್ವೇಷ ರಾಜಕಾರಣ ಎಂದು ಮೇಲ್ನೋಟಕ್ಕೆ ಕಾಣಿಸುತ್ತದೆ. ಇದೆಲ್ಲ ನಿರೀಕ್ಷಿತ ಈ ಹಿಂದೆಯೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದೂ ಕಾರ್ಯಕರ್ತರ ಹತ್ಯೆಯಾಯಿತು. ಇದನ್ನು ನಾವು ಮರೆತಿಲ್ಲ ಎಂದು ಹೇಳಿದರು.

ಆಡಳಿತ ಪಕ್ಷದವರು ಎಲ್ಲರನ್ನು ಸಮಾನವಾಗಿ ನಡೆಸಿಕೊಳ್ಳಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳಿಗೂ ಅನುದಾನ ತಡೆ ಹಿಡಿಯುವುದು ಸರಿಯಲ್ಲ. ಕಾಂಗ್ರೆಸ್‌ನವರು ನಾವು ಏನು ಅಂದುಕೊಂಡಿದ್ದೀವೋ ಆ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಮುದಾಯದವರಿಗೆ ಉನ್ನತ ಸ್ಥಾನ ಕೊಡದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನಲ್ಲಿ ಅತಿ ಹೆಚ್ಚು ಲಿಂಗಾಯತ ಶಾಸಕರೇ ಇದ್ದಾರೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಡ ಹಾಕುವುದು ಬೇಡ. ಕನಿಷ್ಠ ಡಿಸಿಎಂ ಸ್ಥಾನಕ್ಕಾದರೂ ಒತ್ತಡವಾದರೂ ಹಾಕಬಹುದಾಗಿತ್ತು. ಇದನ್ನು ನಾನು ಹೇಳುತ್ತಿಲ್ಲ. ರಾಜ್ಯದ ಜನ ಹೇಳುತ್ತಿದ್ದಾರೆ ಎಂದರು.

Leave a Reply