ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬೆನ್ನಲ್ಲೇ ಹಾಲು ದರ ಹೆಚ್ಚಿಸಿದೆ. ಇದೀಗ ಬಸ್ ಪ್ರಯಾಣ ದರ ಹೆಚ್ಚಳ ಮಾಡಲು ಮುಂದಾಗಿದೆ. ಈ ಮೂಲಕ ಇದು ದರ ಹೆಚ್ಚಳ ಗ್ಯಾರಂಟಿ ಸರ್ಕಾರ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ರೈತಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ನಡಹಳ್ಳಿ, ವಿಧಾನಪರಿಷತ್ ಸದಸ್ಯ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.
ಪ್ರತಿಭಟನಾನಿರತರು ಹಾಲಿನ ಪಾಕೆಟ್ ಪ್ರದರ್ಶಿಸಿದ್ದಲ್ಲದೆ ಹಸು ಹಿಡಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾನಿರತರು ಹಾಲಿನ ದರ, ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಬರ ಭಾಗ್ಯ ಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ನಡಹಳ್ಳಿ ಅವರು, ಲೀಟರ್ಗೆ 50 ಎಮ್ಎಲ್ ಹೆಚ್ಚಿಗೆ ಕೊಡಿ ಎಂದು ಯಾರದರೂ ಒತ್ತಾಯ ಮಾಡಿದ್ದರಾ? ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಥನೆ ಮಾಡುವಂತಹ ಮೊಂಡು ವಾದ ಮಾಡುತ್ತಿದ್ದಾರೆ ಎಂದರು.
2008ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಹಾಲು ಉತ್ಪಾದಕ ರೈತರಿಗೆ ಪ್ರೊತ್ಸಾಹ ಧನ ಕೊಟ್ಟಿದ್ದರು. ಈ ಸರ್ಕಾರ ಸಂಪೂರ್ಣವಾಗಿ ನಿಲ್ಲಿಸಿದೆ. ರೈತರಿಗೆ 5 ರೂ. ನೇರವಾಗಿ ಖಾತೆಗೆ ಹಾಕಬೇಕು. ನಮ್ಮ ಸರ್ಕಾರ ಬಂದರೆ 7 ರೂ. ಕೊಡುತ್ತೇವೆ ಅಂದಿದ್ದರು. ಆದರೆ ಈ ಸರ್ಕಾರ 5 ರೂ. ಸಹ ಕೊಡುತ್ತಿಲ್ಲ ಎಂದರು.
ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಅವರ ಖಾತೆಗಳಿಗೆ ಹಾಕಬೇಕು. ಬೆಲೆ ಹೆಚ್ಚಿಸುವ ಬದಲು ಪ್ರೋತ್ಸಾಹ ಧನ ಕೊಡಬೇಕು ಎಂದು ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ಸರ್ಕಾರ ತನ್ನ ಉದ್ದಟತನ ತೋರಿಸುತ್ತಿದೆ. ಹಾಲಿನ ಬೆಲೆ ಏರಿಸಿ ರೈತರಿಗೆ ಬೆಂಬಲ ನೀಡದೆ ಅವರ ಜೊತೆ ಚೆಲ್ಲಾಟ ಆಡುತ್ತಿದೆ. ರೈತರಿಗೆ ಬರೆ ಹಾಕುವ ಸರ್ಕಾರದ ನೀತಿ ನಿರ್ಧಾರಗಳನ್ನು ಸರ್ಕಾರ ಬದಲಾಯಿಸಬೇಕು ಎಂದರು.
ಬೀಜ ಗೊಬ್ಬರದ ಬೆಲೆ ಗಗನಕ್ಕೇರಿದೆ. ರೈತ ವಿರೋಧಿ ಸರ್ಕಾರ ರಾಜ್ಯದಲ್ಲಿದೆ. ಹಾಲಿನಬೆಲೆ ಏರಿಸಿ ಗ್ರಾಹಕರಿಗೆ ಬರೆ ಹಾಕಿದೆ. ಡೀಸೆಲ್ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ರೈತ, ಮಹಿಳಾ, ಯುವಕರ ವಿರೋಧಿ ಸರ್ಕಾರ ಇದು ಸಿಎಂ ರಾಜೀನಾಮೆ ಕೊಡಬೇಕು ಎಂದರು.




