ಚಿಕ್ಕಬಳ್ಳಾಪುರ: ಈ ದೇಶವನ್ನು ಉಳಿಸುವುದಕ್ಕಾಗಿ ನರೇಗಾ ಬಚಾವೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ವಿಬಿ-ಜಿರಾಮ್-ಜಿ ಯೋಜನೆ ಅನುಷ್ಠಾನ ಖಂಡಿಸಿ ಹಾಗೂ ಮನರೇಗಾ ಯೋಜನೆ ಪುನರ್ ಸ್ಥಾಪನೆಗೆ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ ನರೇಗಾ ಬಚಾವ್ ಆಂದೋಲನ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.
ನಾನು ಯಾವಾಗಲೂ ಹೇಳುತ್ತೇನೆ, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಯಾವಾಗಲೂ ಎಲ್ಲ ವರ್ಗದ ಜನರಿಗೆ ನಾವು ಕಾರ್ಯಕ್ರಮ ಕೊಟ್ಟು, ಬದುಕಿನಲ್ಲಿ ಬದಲಾವಣೆ ತರುವಂತ ಕೆಲಸ ನಾವು ಮಾಡಿಕೊಂಡು ಬರುತ್ತಿದ್ದೇವೆ ಎಂದರು.
20 ವರ್ಷದ ಹಿಂದೆ ಬಡವರಿಗೆ ಉದ್ಯೋಗವನ್ನು ಕಲ್ಪಿಸುವ, ಅವರ ಕೈಗಳಿಗೆ ಕೆಲಸ ಕೊಡುವ ಮನರೇಗಾ ಇಡೀ ದೇಶದಲ್ಲೇ ಕ್ರಾಂತಿಕಾರಕ ಕಾರ್ಯಕ್ರಮವಾಗಿತ್ತು. ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ. ಇಡೀ ದೇಶದ ಕಾರ್ಯಕ್ರಮ. ದೇಶದ ಬಡ ಜನರ ಕಾರ್ಯಕ್ರಮ ಎಂದರು.
ಬಡವರಿಗೆ ಕೂಲಿ ಕೆಲಸಗಳನ್ನು ಕೊಟ್ಟು ಅವರಿಗೆ ಆತ್ಮಸ್ಥೈರ್ಯವನ್ನು ತುಂಬುವಂತ ಕಾರ್ಯಕ್ರಮ. ಮನರೇಗಾ ಯೋಜನೆಯನ್ನು ಉಳಿಸಿ, ಉದ್ಯೋಗ ಹಕ್ಕನ್ನು ಉಳಿಸಿ, ಗ್ರಾಮಗಳ ಸ್ವಯಂ ಆಡಳಿತದ ಹಕ್ಕನ್ನ ಮರು ಸ್ಥಾಪನೆ ಮಾಡುವ ಉದ್ದೇಶದಿಂದ ನಾವು ಇಂದು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಬೈರತಿ ಸುರೇಶ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸೇರಿದಂತೆ ಹಲವು ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.




