ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಈ ಬಾರಿ ಅತ್ಯಧಿಕ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ನಾಯಕರು ಎಲ್ಲರೊಂದಿಗೆ ಸತತ ಸಮಾಲೋಚನೆ ನಡೆಸುತ್ತಿದ್ದು ಒಮ್ಮತದ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸಿದ್ದಾರೆ.
ಧಾರವಾಡ, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ರಾಜ್ಯ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಈ ಎಲ್ಲಾ ಕ್ಷೇತ್ರಗಳ ಉಸ್ತುವಾರಿ ಮಂತ್ರಿಗಳೊಂದಿಗೆ ಸತತ ಸಮಾಲೋಚನೆ ನಡೆಸುತ್ತಿದ್ದು, ಗೆಲ್ಲುವ ಸಾಮರ್ಥ್ಯ ಇರುವವರಿಗಾಗಿ ಹುಡುಕಾಟ ನಡೆಸಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಅಷ್ಟರೊಳಗೆ ಗೆಲ್ಲುವ ಸಾಮರ್ಥ್ಯದ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ರವಾನಿಸಬೇಕಿದೆ.
ಕಾಂಗ್ರೆಸ್ ಸಂಭವನೀಯ ಪಟ್ಟಿ
- ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
- ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
- ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
- ಬೀದರ್ – ರಾಜಶೇಖರ್ ಪಾಟೀಲ್
- ದಕ್ಷಿಣ ಕನ್ನಡ – ವಿನಯಕುಮಾರ್ ಸೊರಕೆ
- ಕೊಪ್ಪಳ – ರಾಜಶೇಖರ್ ಹಿಟ್ನಾಳ್
- ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ
- ಚಾಮರಾಜನಗರ – ಸುನಿಲ್ ಬೋಸ್
- ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪ್ರಕ್ರಿಯೆ ನಡೆದಿದೆ. ಮಂಗಳವಾರ ದೆಹಲಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಮಾರ್ಚ್ 20ರಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.




