ಕಾಂಗ್ರೆಸ್ ನಾಯಕರು ಸಾಲಾಗಿ ಕಾರಾಗೃಹ ಸೇರುವ ದಿನಗಳು ದೂರವಿಲ್ಲ

1 year ago

ಬೇಲೆಕೇರಿ ಅದಿರು ಕಳ್ಳತನ ಪ್ರಕರಣದಲ್ಲಿ ಭ್ರಷ್ಟ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಅದಿರು ಲೂಟಿಕೋರ ಶಾಸಕ ಸತೀಶ್ ಸೈಲ್ ವಿರುದ್ಧದ 6 ಪ್ರಕರಣಗಳಲ್ಲೂ ಶಿಕ್ಷೆ ವಿಧಿಸಿ ಅಂತಿಮ ಆದೇಶ ಹೊರಡಿಸಿರುವ ಕೋರ್ಟ್, ಒಟ್ಟು 44 ಕೋಟಿಗೂ ಹೆಚ್ಚು ದಂಡ ವಿಧಿಸಿದೆ.

ನಿಯಮಗಳ ಪ್ರಕಾರ 2 ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಸತೀಶ್‌ ಸೈಲ್‌ ಶಾಸಕ ಸ್ಥಾನವು ಅನರ್ಹಗೊಳ್ಳಲಿದೆ. 

ಭ್ರಷ್ಟ Indian National Congress – Karnataka  ಪಕ್ಷವು ಗಣಿ ಹಗರಣದ ವಿರುದ್ಧ ಬೆಂಗಳೂರಿನಿಂದ-ಬಳ್ಳಾರಿ ವರೆಗೂ ಪಾದಯಾತ್ರೆ ಮಾಡಿತ್ತು. ಅಂದು ವೀರಾವೇಶದಿಂದ ಪಾದಯಾತ್ರೆ ಮಾಡಿದ್ದ Siddaramaiah   ಅದ್ಯವಾ ಮುಖ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತೀರಿ..?
ಭ್ರಷ್ಟಾಚಾರಂ ಕಾಂಗ್ರೆಸ್ ಲಕ್ಷಣಂ !

ಮುಡಾ ಹಗರಣದಲ್ಲಿ 420, A1 ಆರೋಪಿಯಾಗಿರುವ ಭ್ರಷ್ಟ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವುದು ಖಂಡಿತ. ಹಲವು ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ನಾಯಕರು ಸಾಲು ಸಾಲಾಗಿ ಕಾರಾಗೃಹ ಸೇರುವ ದಿನಗಳು ದೂರವಿಲ್ಲ.

– ಜೆಡಿಎಸ್

Leave a Reply