ಬೆಂಗಳೂರು: ಅಕ್ರಮ ಬೆಟ್ಟಿಂಗ್ ದಂಧೆ ಹಾಗೂ ಆನ್ ಲೈನ್ ಗೇಮಿಂಗ್ ಸಂಬಂಧ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಹಾಗೂ ಚಿತ್ರ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರ 40 ಕೆ.ಜಿ.ಚಿನ್ನ ವಶಪಡಿಸಿಕೊಳ್ಳಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಾಸಕರಿಗೆ ಸೇರಿದ ಚಳ್ಳಕೆರೆಯಲ್ಲಿನ ಮನೆ ಹಾಗೂ ಬ್ಯಾಂಕ್ ಲಾಕರ್‌ಗಳಿಂದ, 50.33 ಕೋಟಿ ರೂ. ಮೌಲ್ಯದ 40 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿರುವ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಚಿತ್ರದುರ್ಗದ ಶಾಸಕರಾಗಿರುವ ವೀರೇಂದ್ರ ಪಪ್ಪಿಯವರ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಅವರ ಮಾಹಿತಿಯನ್ನು ಆಧರಿಸಿ ಅವರ ನಿವಾಸ ಹಾಗೂ ಫೆಡರಲ್ ಬ್ಯಾಂಕ್‌ನ ಎರಡು ಲಾಕರ್‌ಗಳಲ್ಲಿ ಪರಿಶೀಲನೆ ಮಾಡಿದ್ದಾರೆ.
ಪರಿಶೀಲನೆ ವೇಳೆ 40 ಕೆಜಿ ತೂಕದ ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇಲ್ಲಿಯವರೆಗೆ ಶಾಸಕ ವೀರೇಂದ್ರ ಅವರಿಂದ ಜಪ್ತಿ ಮಾಡಿರುವ ನಗ ನಾಣ್ಯದ ಮೊತ್ತವು 150 ಕೋಟಿ ರೂ.ಗಳಾಗಿದೆ.
ವಿಜಯಪುರದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವೀರೇಂದ್ರ ಮತ್ತು ಆತನ ಕುಟುಂಬದ 150 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಕಿಂಗ್-567, ರಾಜಾ-567, ಲಯನ್-567, ಪ್ಲೇ-567, ಪ್ಲೇವಿನ್-567 ಎಂಬ ಹೆಸರಿನಲ್ಲಿ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಶಾಸಕ ವೀರೇಂದ್ರ ಪಪ್ಪಿ ಅವರು, ಸುಮಾರು 2 ಸಾವಿರ ಕೋಟಿ ರೂ. ವಹಿವಾಟು ನಡೆಸಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ.
ಅಕ್ರಮ ಬೆಟ್ಟಿಂಗ್‌ನಿಂದ ಬಂದಂತಹ ಹಣವನ್ನು ವಿದೇಶಿ ಬ್ಯಾಂಕ್‌ಗಳಿಗೆ ಶಾಸಕರು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಕಂಡುಬಂದಿದೆ. ಶಾಸಕರ ಜೊತೆಗೆ ಅವರ ಸಹೋದರರಾದ ಕೆ.ಸಿ.ತಿಪ್ಪೇಸ್ವಾಮಿ ಮತ್ತು ಪೃಥ್ವಿರಾಜ್ ದುಬೈನಲ್ಲಿ ಡೈಮಂಡ್ ಸಾಫ್ಟ್‌ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ ಹೆಸರಿನಲ್ಲಿ ಕಾಲ್‌ಸೆಂಟರ್‌ಗಳನ್ನು ತೆರೆದು ಆನ್‌ಲೈನ್ ಗೇಮಿಂಗ್ ವ್ಯವಹಾರ ನಡೆಸುತ್ತಿದ್ದರು ಎಂಬುದು ಇಡಿ ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ವೀರೇಂದ್ರ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಈ ಹಿಂದೆ ವೀರೇಂದ್ರ ಮತ್ತು ಅವರ ಕುಟುಂಬದವರಿಂದ 21 ಕೆ.ಜಿ. ಚಿನ್ನದ ಗಟ್ಟಿಗಳು, ನಗದು, ಚಿನ್ನಾಭರಣ, ಬೆಳ್ಳಿ ಆಭರಣಗಳು, ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು 103 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು.




