ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 15 ಕಿಲೋ ಮೀಟರ್ ನಡಿಗೆ ಜಾಥಾ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜಾಜಿನಗರ, ಶಿವನಗರ, ಬಸವೇಶ್ವರ ನಗರದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ನಡಿಗೆ ಕಾರ್ಯಕ್ರಮ ನಡೆಯಿತು.
ಮಾಜಿ ಮೇಯರ್ ಜಿ.ಪದ್ಮಾವತಿ ಮಾತನಾಡಿ, ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಶುಭ ಸಂದರ್ಭದಲ್ಲಿ ನಡಿಗೆ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ರಾಜಾಜಿನಗರ, ಶಿವನಗರ, ಬಸವೇಶ್ವರ ನಗರ ಪ್ರದೇಶಗಳಲ್ಲಿ ಸರಿಸುಮಾರು 15 ಕಿಲೋ ಮೀಟರ್ ನಡಿಗೆ ಜಾಥ ಬಹಳ ಯಶ್ವಸಿಯಾಗಿ ಮುಗಿದಿದೆ ಎಂದರು.
ಬಿ.ಬಿ.ಎಂ.ಪಿ. ಮಾಜಿ ಸದಸ್ಯ ಜಿ.ಕೃಷ್ಣಮೂರ್ತಿ ಮಾತನಾಡಿ, ಕಾಂಗ್ರೆಸ್ ಪಕ್ಷ ಬಡವರ ಇರುವ ಪಕ್ಷ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ನೀಡಿ, ಸ್ವಾತಂತ್ರ್ಯ ಲಭಿಸಲು ಮಹತ್ವವಾದ ಪಾತ್ರವನ್ನು ಕಾಂಗ್ರೆಸ್ ಪಕ್ಷ ವಹಿಸಿದೆ. ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಎಲ್ಲರು ಅರಿತುಕೊಳ್ಳಬೇಕು ಎಂದರು.
ಬಿ.ಬಿ.ಎಂ.ಪಿ. ಮಾಜಿ ಸದಸ್ಯೆ ಮಂಜುಳ ವಿಜಯಕುಮಾರ್ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರ ತ್ಯಾಗ, ಹೋರಾಟ, ಬಲಿದಾನದ ಪ್ರತಿಫಲದಿಂದ ಇಂದು ನಾವು ಸ್ವಾತಂತ್ರ್ಯ ಪಡೆದು ಈ ದೇಶದಲ್ಲಿ ಬದುಕಲು ಸಾಧ್ಯವಾಗಿದೆ. ಸ್ವಾತಂತ್ರ್ಯ ಭಾರತದಲ್ಲಿ ಸಂವಿಧಾನ ನೀಡಿದ ಅವಕಾಶದಿಂದ ರಾಜಕೀಯ, ವಿವಿಧ ಕ್ಷೇತ್ರದಲ್ಲಿ ಮಹಿಳೆಯರು ಸರಿಸಮಾನ ಹಕ್ಕು ಪಡೆಯಲು ಸಾಧ್ಯವಾಗಿದೆ ಎಂದರು.
ವಿಧಾನಪರಿಷತ್ ಸದಸ್ಯ ಸಲೀಮ್ ಅಹಮದ್, ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಕೃಷ್ಣ, ಶ್ರೀ ರಾಮಮಂದಿರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೆಂಕಟೇಶ್, ರಾಜಾಜಿನಗರ ವಾರ್ಡ್ ಬಿ.ಬಿ.ಎಂ.ಪಿ. ಮಾಜಿ ಸದಸ್ಯ ಜಿ.ಕೃಷ್ಣಮೂರ್ತಿ, ಬಿ.ಬಿ.ಎಂ.ಪಿ. ಮಾಜಿ ಸದಸ್ಯೆ ಹೆಚ್.ವಿಜಯಕುಮಾರ್, ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಆಪಲ್ ನಾಗರಾಜ್, ಕಾಂಗ್ರೆಸ್ ಮುಖಂಡ ರಾಕೇಶ್, ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಜೊತೆಯಲ್ಲಿ 15 ಕಿಲೋ ಮೀಟರ್ ನಡಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು.




