ಬೆಂಗಳೂರು: ಮೈಸೂರು ಮಹಾರಾಜರಿಗೆ ಏಕವಚನದಲ್ಲಿ ಮಜಾವಾದಿ ಸಿದ್ದರಾಮಯ್ಯ ಅವರು ಕರೆದಿದ್ದು ಒಂದೆರಡು ಬಾರಿಯಂತೂ ಅಲ್ಲ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಶ್ರೀ ಯದುವೀರ್ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧೆಗೆ ಇಳಿದಾಗಿನಿಂದಲೂ ಅವರನ್ನು ತೇಜೋವಧೆ ಮಾಡಲು ಸಕಲ ಪ್ರಯತ್ನವನ್ನೂ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ಸಿಗರು ದುಂಬಾಲು ಬಿದ್ದು ಕೂತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ಮಹಾರಾಜರಿಗೆ ಅವಹೇಳನ ಮಾಡಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ರೈಲಿಗೆ ಒಡೆಯರ್ ಹೆಸರಿನ ಬದಲು ಟಿಪ್ಪು ಹೆಸರಿಟ್ಟಿದ್ದು, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಚಿಂತಿಸಿದ್ದು, ಟಿಪ್ಪು ಪ್ರತಿಮೆ ಮಾಡಲು ಚಿಂತಿಸುತ್ತಿರುವುದು ಒಡೆಯರ್ ಹೆಸರನ್ನು ಸಂಪೂರ್ಣವಾಗಿ ಅಳಿಸಿ ಹಾಕುವ ಹುನ್ನಾರವಲ್ಲವೇ? ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ಒಡೆಯರ್ ಮೇಲೆ ಗೌರವ, ಅವರ ಋಣದ ಮೇಲೆ ನಿಯತ್ತು ಇದ್ದರೆ, ಕೂಡಲೇ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ವಾಪಸ್ ಪಡೆದು ತೋರಿಸಲಿ. ಅಮೇಲೆ ಮೈಸೂರು ಒಡೆಯರ್ ಬಗ್ಗೆ ಮಾತನಾಡುವ ಯೋಗ್ಯತೆ ತೋರಲಿ ಎಂದಿದೆ.



