ಶಿವಮೊಗ್ಗ: ಭದ್ರಾವತಿ ಶಾಸಕ ಸಂಗಮೇಶ್ ಮತ್ತು ಕುಟುಂಬ ಸದಸ್ಯರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಬಿಜೆಪಿ ಸರಕಾರ ಸುಳ್ಳು ದೂರು ದಾಖಲು ಮಾಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ನಡೆಸಿದ ಬೃಹತ್ ಜನಾಕ್ರೋಶ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.




