ಬೆಂಗಳೂರು: ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ಗಳು, ಕೊಲೆಗಡುಕರ ತಾಣವನ್ನಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪಾದಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈಯಲಾಗುತ್ತಿದೆ. ಈ ಮೂಲಕ ಕೊಲೆ ಭಾಗ್ಯ ಯೋಜನೆ ಜಾರಿಗೆ ಬಂದಿದೆ ಎಂದಿದ್ದಾರೆ.
ಮನೆ ಮನೆಗಳಿಗೇ ನುಗ್ಗಿ ಗೃಹಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ, ಭಾಗ್ಯಲಕ್ಷ್ಮಿಯರನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಅರಣ್ಯರೋದನವಾಗುತ್ತಿದೆ. ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದೆ ಎಂದಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮನೆಯಿಂದ ಆಚೆ ಬರಲೂ ಭಯ ಪಡುವ ವಾತಾವರಣ ನಿರ್ಮಾಣಗೊಂಡಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು ಕೊಲೆ, ದಾಂಧಲೆ, ದರೋಡೆ, ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆಯಿಡದೇ ನಾಗರಿಕ ಸಮಾಜದ ವಿಶ್ವಾಸ ಕಳೆದುಕೊಂಡಿದೆ ಎಂದಿದ್ದಾರೆ.
ಇದರಿಂದಾಗಿ, ರಾಜ್ಯದ ಗೌರವ, ಘನತೆಗಳು ಕುಸಿದು ಬೀಳುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರಲಾರದ ಸ್ಥಿತಿ ತಲುಪಿರುವ ಕಾಂಗ್ರೆಸ್ ಸರ್ಕಾರ ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಲಿ, ಹಾಗೆಯೇ ಮುಖ್ಯಮಂತ್ರಿಗಳು ಸರಣಿ ಘಟನೆಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.




