ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವಾರು ವಿಷಯಗಳಲ್ಲಿ ಹೈಕಮಾಂಡ್ ಗಮನ ಸೆಳೆಯಲು ಮುಂದಾಗಿದ್ದ ಪರಿಶಿಷ್ಟ ಜಾತಿ ಮತ್ತು ವರ್ಗದ ಮಂತ್ರಿಗಳು ಇದೀಗ ತಮ್ಮ ಹೋರಾಟವನ್ನು ಕೆಲಕಾಲ ಮುಂದೂಡಲು ತೀರ್ಮಾನಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸದ್ಯದಲ್ಲಿಯೇ ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಈ ನಡುವೆ ರಾಜ್ಯದ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಐದು ವರ್ಷಗಳ ಆಡಳಿತ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ರಾಜ್ಯದ ಮುಖ್ಯಮಂತ್ರಿ ಎಂದು ಘೋಷಿಸಿದ ಆ ಸಂದರ್ಭದಲ್ಲಿ ಹೈಕಮಾಂಡ್ ನವರು ನಮಗೆ ಎರಡೂವರೆ ವರ್ಷ ಅಧಿಕಾರ ಎಂದೇನೂ ಹೇಳಿರಲಿಲ್ಲ. ಹೀಗಾಗಿ ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ. ಹೀಗಾಗಿ ಅವರು ತಮ್ಮ ಆಡಳಿತ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸುಳಿವು ಕೊಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ , ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ತೀರ್ಮಾನ ಏನೇ ಇದ್ದರೂ ನಾವು ಒಪ್ಪಿಕೊಳ್ಳುತ್ತೇವೆ ಎಂದರು.
ಎಐಸಿಸಿ ಹೊಸ ಕಚೇರಿ ಉದ್ಘಾಟನೆ ವೇಳೆ ಅವರು ಎಐಸಿಸಿ ಪುನಾರಚನೆ ಆಗಬೇಕು ಅಂದಿದ್ದರು. ಆ ಅರ್ಥದಲ್ಲಿ ಅವರು ಹೇಳಿರಬಹುದು. ಕೆಲ ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತೋ ಗೊತ್ತಿಲ್ಲ ಎಂದರು.




