ಬೆಂಗಳೂರು: ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮತ್ತು ಕಾಂಗ್ರೆಸ್ ನಾಯಕರ ಆಂತರಿಕ ಕಲಹದಿಂದಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವಂತಾಯಿತು ಎಂದು ಆಹಾರ ಸಚಿವ ಕೆ.ಮುನಿಯಪ್ಪ ಹೇಳಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದವರು, ಚುನಾವಣೆಯ ನಾಯಕತ್ವ ವಹಿಸಿದವರು ಕೆ.ಎಚ್.ಮುನಿಯಪ್ಪ ಕೋಲಾರ ಚುನಾವಣೆಗೆ ಬರಬಾರದು ಎಂದು ಹಠ ಹಿಡಿದವರು ಚುನಾವಣೆ ಸೋಲಿನ ಹೊಣೆಗಾರಿಕೆ ಹೊರಬೇಕಿದೆ ಎಂದರು.
30 ವರ್ಷ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಫಲಿತಾಂಶ ನೋವು ತಂದಿದೆ. ಮುಂದೆ ಇದನ್ನು ಸರಿಪಡಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲಲೇಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಗುಂಪುಗಾರಿಕೆಯನ್ನು ಸರಿಪಡಿಸಲು ರಾಜ್ಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
ಜೆಡಿಎಸ್-ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ ನಾವು ಹೊಸ ಚಿಂತನೆ ಮಾಡಬೇಕು, ಕಾಂಗ್ರೆಸ್ನಲ್ಲಿದ್ದು ಕಾಂಗ್ರೆಸ್ ಪಕ್ಷವನ್ನೇ ಸೋಲಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವೇ ಅವರಿಗೆ ಬುದ್ಧಿ ಹೇಳಬೇಕಿದೆ ಎಂದರು.
ಕಾಂಗ್ರೆಸ್ನಲ್ಲಿ ಜನರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ವೈಫಲ್ಯಗಳಾದವು. ತಾವು ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೆ. ಆದರೆ ಕೆಲವರು ಕಾಂಗ್ರೆಸ್ ಪಕ್ಷ ಮುಗಿದು ಹೋದರೂ ಸರಿ, ರಾಜಿಯಾಗುವುದು ಬೇಡ ಎಂದು ನಿರ್ಧಾರ ಮಾಡಿಕೊಂಡಂತಿದೆ. ಹಾಗಾಗಿ ಇಂತಹ ಫಲಿತಾಂಶ ಬಂದಿದೆ ಎಂದರು.
ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಎಲ್ಲಿಯೂ ಚರ್ಚೆಯಾಗಿಲ್ಲ. ಚುನಾವಣೆಯಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಫಲಿತಾಂಶದಲ್ಲಿ ಗೆಲುವಿನ ಸಂಖ್ಯೆಯಲ್ಲಿ ಹಿನ್ನಡೆಯಾಗಿದ್ದರೂ ಮತಗಳಿಕೆ ಹೆಚ್ಚಾಗಿದೆ. ಹೀಗಾಗಿ ಸಚಿವರ ತಲೆದಂಡದ ಪ್ರಶ್ನೆ ಇಲ್ಲ ಎಂದರು.
ಚುನಾವಣೆ ಫಲಿತಾಂಶದ ಬಗ್ಗೆ ವಿಶ್ಲೇಷಣೆ ಮಾಡಿರುವ ಗೃಹ ಸಚಿವ ಪರಮೇಶ್ವರ್, ಮತ ಗಳಿಕೆಯಲ್ಲೂ ಗಣನೀಯ ಏರಿಕೆಯಾಗಿದೆ. ಫಲಿತಾಂಶ ಸಮಾಧಾನ ತಂದಿದೆ. ಆದರೆ ಸಂತೋಷ ತಂದಿಲ್ಲ ಎಂದರು.
ಕಾಂಗ್ರೆಸ್ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಈಡೇರಿಲ್ಲ. ಆದರೆ ಒಂದು ಸ್ಥಾನದಲ್ಲಿದ್ದ ಕಾಂಗ್ರೆಸ್ 9ಕ್ಕೆ ಏರಿಕೆಯಾಗಿದೆ. ಅದೊಂದೇ ಸಮಾಧಾನ ಎಂದರು.
ಆಡಳಿತಾರೂಢ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ಜನ ನಮಗೂ ಎಚ್ಚರಿಕೆ ನೀಡಿದ್ದಾರೆ. ಒಂದು ವರ್ಷದ ಆಡಳಿತ ಜನಸಾಮಾನ್ಯರಿಗೆ ಸಮಾಧಾನ ತಂದಿಲ್ಲ ಎಂಬುದನ್ನು ತೋರಿಸುತ್ತದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಒಳ್ಳೆಯ ಆಡಳಿತ ನೀಡುವತ್ತ ಮುಖ್ಯಮಂತ್ರಿ, ಅಧ್ಯಕ್ಷರು ಸೇರಿ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ. ಸರ್ಕಾರ ಗ್ಯಾರಂಟಿ ನೀಡಿದ ಹೊರತಾಗಿಯೂ ಜನರ ತೀರ್ಪು ಬೇರೆಯದೇ ಆಗಿದೆ ಎಂದರು.
2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಫಲ ನೀಡಲಿಲ್ಲ. ಈ ಬಾರಿಯ ಜೆಡಿಎಸ್-ಬಿಜೆಪಿ ಮೈತ್ರಿ ಪರಿಣಾಮ ಬೀರಿದೆ. ಬಹುಶಃ ಅದು ಪರಿಣಾಮ ಬೀರುವುದಿಲ್ಲ ಎಂಬ ಅಂದಾಜಿನಲ್ಲಿ ಕಾಂಗ್ರೆಸಿಗರಿದ್ದೆವು. ಆದರೆ ಅದು ಹುಸಿಯಾಗಿದೆ ಎಂದರು.
ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ 100ಕ್ಕೆ 100 ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಫಲಿತಾಂಶ ಏರುಪೇರಾಗಿದೆ. ಹೀಗಾಗಿ ತಾವು ಮತ್ತು ಸಚಿವ ಕೆ.ಎನ್.ರಾಜಣ್ಣ ಪಕ್ಷದ ವರಿಷ್ಠರಿಗೆ ವಿವರಣೆ ಕೊಡುತ್ತೇವೆ ಎಂದರು.




