ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್,ಕರ್ನಾಟಕದಲ್ಲಿ ಇದೀಗ ಪರೋಕ್ಷ ತುರ್ತು ಪರಿಸ್ಥಿತಿ ಹೇರಲು ಹೊರಟಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
‘ಪ್ರಜಾಪ್ರಭುತ್ವ ದೇಗುಲ’ವೆನಿಸಿರುವ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವ ದುಷ್ಕೃತ್ಯ ನಡೆಸಲು ಪ್ರಚೋದಿಸಿ ಇದೀಗ ಹಲ್ಲೆ ಯತ್ನಕ್ಕೊಳಗಾದ ನಮ್ಮ ಹಿರಿಯ ಶಾಸಕ C T Ravi ಅವರನ್ನೇ ಬಂಧಿಸಿ ಪೊಲೀಸ್ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಗೂಂಡಾ ಸಾಮ್ರಾಜ್ಯವನ್ನು ನಿರ್ಮಿಸುತ್ತಿದೆ.
ಸದನದ ಒಳಗಿನ ಘಟನೆಯನ್ನು ಉಲ್ಲೇಖಿಸಿ ದೂರು ಪಡೆದುಕೊಂಡು ಸಿ.ಟಿ.ರವಿ ಅವರನ್ನು ಬಂಧಿಸಿರುವ ಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುಣಿಕೆ ಬಿಗಿಯುವ ಸರ್ವಾಧಿಕಾರಿ ಧೋರಣೆಯಾಗಿದೆ, ವಿಧಾನಮಂಡಲದ ಘನತೆ ಹಾಗೂ ಅದರ ಸಾಂವಿಧಾನಿಕ ಶಕ್ತಿಯನ್ನು ಮಣ್ಣು ಪಾಲಾಗಿಸುವ ದಾರ್ಷ್ಟ್ಯತನ ಮೆರೆಯಲು ಕಾಂಗ್ರೆಸ್ ಹೊರಟಿದೆ.
ಮತ್ತೊಂದು ತುರ್ತು ಪರಿಸ್ಥಿತಿ ಹೇರಿಕೆಯ ಪರೋಕ್ಷ ಹವಣಿಕೆಯಲ್ಲಿರುವ Indian National Congress – Karnataka ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ “ಪ್ರಜಾಪ್ರಭುತ್ವ ಉಳಿಸಿ ಗೂಂಡಾ ಕಾಂಗ್ರೆಸ್ ತೊಲಗಿಸಿ” ಎಂಬ ಬೃಹತ್ ಜನಾ೦ದೋಲನ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ನಾಳೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.
ಸಿ.ಟಿ. ರವಿ ಅವರನ್ನು ಬೇಷರತ್ ಬಿಡುಗಡೆ ಮಾಡಿ ಅವರ ಮೇಲೆ ದೌರ್ಜನ್ಯ ನಡೆಸಿದ ಕಾಂಗ್ರೆಸ್ ಗೂಂಡಾಗಳನ್ನು ಜೈಲಿಗೆ ಅಟ್ಟುವ ವರೆಗೂ ಬಿಜೆಪಿ ಹೋರಾಟ ನಿಲ್ಲದು.
ಶಾಸಕ ಸಿ ಟಿ ರವಿಯವರ ಮೇಲೆ ಸುವರ್ಣ ಸೌಧದಲ್ಲಿ ಮಾರ್ಷಲ್ ಗಳ ಸುಮ್ಮುಖದಲ್ಲೇ ಹೊರಗಿನ ಗೂಂಡಾಗಳಿಂದ ನಡೆದಿರುವ ದೌರ್ಜನ್ಯ ಹಾಗೂ ಮಾರಣಾಂತಿಕ ಹಲ್ಲೆಯತ್ನದ ಕುರಿತು ಉಭಯ ಸದನಗಳ ಸ್ಪೀಕರ್ ಗಳು ತಮ್ಮ ನಿಲುವು ಪ್ರಕಟಿಸಿ ಕ್ರಮ ಕೈಗೊಳ್ಳಬೇಕು, ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸುವೆ.
– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ


