ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳನ್ನೂ ನಾವು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತವರು ಕ್ಷೇತ್ರ ಮೈಸೂರು-ಕೊಡಗು,ಚಾಮರಾಜನಗರ ಕ್ಷೇತ್ರವಷ್ಟೇ ಅಲ್ಲ, ರಾಜ್ಯದ ಎಲ್ಲ ಕ್ಷೇತ್ರಗಳೂ ನಮಗೆ ಪ್ರತಿಷ್ಠೆಯಾಗಿವೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ. ಆದರೆ, ಅದು ನಮಗೇ ಅನುಕೂಲ. ನಮ್ಮ ಚುನಾವಣಾ ಕಾರ್ಯತಂತ್ರಕ್ಕೆ ಅನುಗುಣವಾಗಿ ನಾವು ಸಾಧನೆಯನ್ನು ಮುಂದಿಟ್ಟುಕೊಂಡು ಮತದಾರರ ಬಳಿ ಹೋಗುತ್ತೇವೆ ಎಂದರು.
ಚುನಾವಣಾ ಕಾರ್ಯತಂತ್ರದಲ್ಲಿ ಹಲವಾರು ಗುಟ್ಟುಗಳಿರುತ್ತವೆ. ಆದರೆ, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಅಧಿಕಾರಕ್ಕೆ ಬಂದ ತಕ್ಷಣವೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಜನರ ಆರ್ಥಿಕ ಬದುಕನ್ನು ಉತ್ತಮಗೊಳಿಸುವತ್ತ ನಾವು ಹೆಜ್ಜೆ ಇಟ್ಟಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ 52 ಸಾವಿರಕ್ಕೂ ಹೆಚ್ಚು ಹಣವನ್ನು ಮೀಸಲಿಟ್ಟಿದ್ದೇವೆ. ಇದಲ್ಲದೆ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.
ಸದ್ಯ ನಮಗೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ನಡೆಯುತ್ತಿದ್ದು, ನಾಳೆ ಅಥವಾ ನಾಡಿದ್ದು ಪ್ರಕಟಿಸಲಾಗುವುದು. ಇದರಲ್ಲಿ ನಮಗೆ ಯಾವುದೇ ಕಗ್ಗಂಟಿಲ್ಲ, ಗೊಂದಲವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹೆಚ್ಚಿನ ಕ್ಷೇತ್ರ ಗೆಲ್ಲದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಬಹುದು ಎಂಬ ಶಾಸಕ ಗುಬ್ಬಿ ಶ್ರೀನಿವಾಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಗುಬ್ಬಿ ಶ್ರೀನಿವಾಸ್ ಹೇಳಿಕೆಯನ್ನು ಮಾಧ್ಯಮದವರು ಸಂಪೂರ್ಣವಾಗಿ ತೋರಿಸಿಲ್ಲ. ಅರ್ಧ ಮಾತ್ರ ಹಾಕಿದ್ದೀರಿ. ಸಿದ್ದರಾಮಯ್ಯ ಬಡವರ ಪರವಾಗಿ ಕೆಲಸ ಮಾಡಿದ್ದಾರೆ. ಜನರು ಅವರನ್ನು ಬೆಂಬಲಿಸಬೇಕು ಎಂದು ಅವರು ಹೇಳಿದ್ದಾರೆ. ಇದನ್ನು ಬಿಟ್ಟು ಬೇರೇನನ್ನೂ ಅವರು ಹೇಳಿಲ್ಲ ಎಂದರು.



