ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದದಿಂದ ಆಡಳಿತಕ್ಕೆ ಬರಲಿದೆ ಎಂದು ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ ಹೇಳಿದರು.
ತಮ್ಮ ಹುಟ್ಟುಹಬ್ಬದ ಅಚರಣೆಯನ್ನು ಅಭಿಮಾನಿಗಳು, ಸ್ನೇಹಿತರ ನಡುವೆ ಆಚರಿಸಿಕೊಂಡು ಮಾತಾಡಿದ ಅವರು, ಕಾಂಗ್ರೆಸ್ ಪಕ್ಷ ನನ್ನ ಗುರುತಿಸಿ ಎರಡು ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ಮಹಾಲಕ್ಷ್ಮೀಪುರಂ ವಾರ್ಡ್ ನಾಗರಿಕರ ಆಶೀರ್ವಾದದ ಫಲದಿಂದ ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ ಆಯ್ಕೆಯಾದೆ ಎಂದರು.
ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದದಿಂದ ಆಡಳಿತಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷ ಜನಪರ ಆಡಳಿತ, ಜನಮೆಚ್ಚಿದ ಆಡಳಿತ ನೀಡಿ ರಾಜ್ಯದ ಮನೆ ಮಾತಾಗಿದ್ದಾರೆ ಎಂದರು.
ನನ್ನ ರಾಜಕೀಯ ಜೀವನಕ್ಕೆ ಸಹಕಾರ, ಬೆಂಬಲ ನೀಡಿದ ಮಹಾಲಕ್ಷ್ಮೀಪುರಂ ವಾರ್ಡ್ ಸಮಸ್ತ ನಾಗರಿಕರಿಗೆ ಹೃತ್ವೂರ್ವಕ ಧನ್ಯವಾದಗಳು ಎಂದು ಹೇಳಿದರು.



