ಬೆಂಗಳೂರು: ಕೇಂದ್ರ ಸರ್ಕಾರ ರೂಪಿಸಿರುವ ವಿಬಿಜಿ ರಾಮ್ ಜಿ ಯೋಜನೆಯನ್ನು ಬಲವಾಗಿ ವಿರೋಧಿಸಿರುವ ರಾಜ್ಯ ಕಾಂಗ್ರೆಸ್ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಕಾಯ್ದೆ ಮರು ಜಾರಿ ಆಗುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಯುಪಿಎ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಬಚಾವೊ ಅಭಿಯಾನವನ್ನು ಜನಾಂದೋಲನವಾಗಿ ಪರಿವರ್ತಿಸುವುದಾಗಿ ಘೋಷಿಸಿದ್ದು, ಕೇಂದ್ರ ಸರ್ಕಾರದ ಹೊಸ ಕಾಯಿದೆ ವಿರುದ್ಧ ಆಂದೋಲನ ಮಾಡುವುದಾಗಿ ಹೇಳಿದೆ.
ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ನರೇಗಾ ಬಚಾವೊ ಸಂಗ್ರಾಮ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ನರೇಗಾ ಕಾಯ್ದೆಯ ಬದಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೊಸತಾಗಿ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಆಗಲೇಬೇಕು.ಮನರೇಗಾ ಕಾಯ್ದೆ ಮರು ಜಾರಿ ಆಗುವವರೆಗೆ ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗೆ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.
ನರೇಗಾ ಬಚಾವೊ ಅಭಿಯಾನವನ್ನು ಆಂದೋಲನವಾಗಿ ಮಾಡಬೇಕಿದೆ. ಈ ಆಂದೋಲನ ನರೇಗಾ ಕಾಯ್ದೆ ಮತ್ತೆ ಜಾರಿಗೆ ಬರುವವರೆಗೆ ಮುಂದುವರಿಯಬೇಕು. ಉತ್ತರ ಭಾರತದಲ್ಲಿ ರೈತರು ಕಾಯ್ದೆ ಬದಲಾವಣೆಗೆ ಹೋರಾಟ ಮಾಡಿದ ರೀತಿಯಲ್ಲಿಯೇ ನಾವೂ ಹೋರಾಟ ಮಾಡಬೇಕು ಎಂದು ಮನವಿ ಮಾಡಿದರು
ನರೇಗಾ ಕಾಯ್ದೆಯ ಬದಲು ಹೊಸ ಕಾಯ್ದೆ ಜಾರಿಗೆ ಬಂದರೆ, ಕೇಂದ್ರ ಸರ್ಕಾರ ಅಧಿಸೂಚನೆಯ ಮೂಲಕ ಸೂಚಿಸಿದ ಸ್ಥಳದಲ್ಲಿ ಕೆಲಸ ಮಾಡಬೇಕಾಗುತ್ತದೆ. ಹಳೆ ಕಾಯ್ದೆಯ ಪ್ರಕಾರ ನಾವು ಶೇ 10ರಷ್ಟು ಹಣ ಮಾತ್ರ ಕೊಡುತ್ತಿದ್ದೆವು. ಹೊಸ ಕಾಯ್ದೆಯಲ್ಲಿ ಶೇ 40ರಷ್ಟು ರಾಜ್ಯ ಕೊಡಬೇಕು. ಶೇ 60ರಷ್ಟು ಕೇಂದ್ರ ಸರ್ಕಾರ ಕೊಡುತ್ತದೆ. ಇದರಿಂದ ರಾಜ್ಯಕ್ಕೆ ಸುಮಾರು 2,500 ಕೋಟಿ ಹೊರೆ ಬೀಳಲಿದೆ ಎಂದರು.
ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯು ನರೇಗಾ ಕಾಯ್ದೆ ರದ್ದು ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆಮನಮೋಹನ ಸಿಂಗ್ ಪ್ರಧಾನಿ ಆಗಿದ್ದಾಗ ನರೇಗಾ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿ ಮಾಡಿದ್ದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಾದ್ಯಂತ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ ಎಂದರು
ನರೇಗಾ ಕಾಯ್ದೆ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಅದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ಕಾಯ್ದೆಯ ಹೆಸರಿನಲ್ಲಿರುವ ರಾಮ್ ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೊಂದು ಹಾಕಿದೆ ಈ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆದಿದೆ ಎಂದು ಆಪಾದಿಸಿದರು.
ಯೋಜನೆ ಮರುಜಾರಿಗೆ ಆಗ್ರಹಿಸಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪಕ್ಷದ ಕಾರ್ಯಕರ್ತರು ಪಾದಯಾತ್ರೆ ನಡೆಸಲಿದ್ದಾರೆ ಶಿಕಾರಿಪುರ ಸೇರಿದಂತೆ ನಾಲ್ಕೈದು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ಪಾದಯಾತ್ರೆಯಲ್ಲಿ ತಾವು ಪಾಲ್ಗೊಳ್ಳುತ್ತೇನೆ ಎಂದರು.
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಿದೆ ಈ ಕೆಲಸದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ತೊಡಗಿಕೊಳ್ಳಬೇಕು ಈ ಹೋರಾಟದಲ್ಲಿ ಯಾರಾದರೂ ಆಸಕ್ತಿ ತೋರದೆ ಹೋದಲ್ಲಿ ಅವರನ್ನು ಮುಲಾಜಿಲ್ಲದೆ ಪಕ್ಷದಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್‌ನಿಂದ ಹೋರಾಟ: ನರೇಗಾ ಕಾಯ್ದೆ ಮರು ಜಾರಿಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ರೂಪಿಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ, ಚಂದ್ರಶೇಖರ್, ಜಿಲ್ಲಾಮಟ್ಟದಲ್ಲಿ ಉಸ್ತುವಾರಿ ಸಚಿವರು, ಶಾಸಕರನ್ನು ಸೇರಿಸಿ ಜಿಲ್ಲಾ ಘಟಕಗಳ ಅಧ್ಯಕ್ಷರು ಸುದ್ದಿಗೋಷ್ಠಿಗಳನ್ನು ನಡೆಸಬೇಕು. ಈ ಹೋರಾಟಕ್ಕೆ ಕೈಜೋಡಿಸದ ಉಸ್ತುವಾರಿ ಸಚಿವರು, ಶಾಸಕರ ಕುರಿತು ಕೆಪಿಸಿಸಿಗೆ ವರದಿ ನೀಡಬೇಕು. ಅದನ್ನು ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದರು.
ನರೇಗಾ ಮರು ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾಮಟ್ಟದಲ್ಲಿ ಒಂದು ದಿನದ ಸಾಂಕೇತಿಕ ಉಪವಾಸ ಮಾಡಬೇಕು. ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ಮಾಡಬೇಕು. ಜ. 30ರಂದು ವಾರ್ಡ್ ಮಟ್ಟದಲ್ಲಿ ಶಾಂತಿಯುತ ಧರಣಿ ಮಾಡಬೇಕು. ಫೆ. 6ರಂದು ನರೇಗಾ ಬಚಾವ್ ಧರಣಿ ಹಮ್ಮಿಕೊಳ್ಳಬೇಕು. ಬಳಿಕ ರಾಜ್ಯಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.




