2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಮರಳಲಿದೆ: ಜಗದೀಶ್ ಶೆಟ್ಟರ್

3 years ago

#Congress #return #power #LokSabha #elections #JagdishShettar

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಪರಿಣಾಮ ಬೀರಿದೆ. ಐದು ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಎಲ್ಲರೂ ಹೇಳುತ್ತಿದ್ದರೂ, ನಿರೀಕ್ಷೆ ಮೀರಿ ಸರ್ಕಾರ ಭರವಸೆಗಳನ್ನು ಈಡೇರಿಸಿದೆ. ಇದು ರಾಷ್ಟ್ರಕ್ಕೆ ಮಾದರಿ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಭರವಸೆಗಳಂತಹ ಕಾರ್ಯಕ್ರಮಗಳ ಜಾರಿಗೆ ಒತ್ತಡ ಹೆಚ್ಚಿದೆ. ಜೊತೆಯಲ್ಲಿ ಕಾಂಗ್ರೆಸ್ ಮೇಲೆ ಭರವಸೆ ಹೆಚ್ಚುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಇತ್ತೀಚೆಗೆ ಬಿಜೆಪಿ ತೊರೆದ ಮಾಜಿ ಶಾಸಕ ಹಾಗೂ ರಾಮಪ್ಪ ಲಮಾಣಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ದೇಶದಲ್ಲಿ ರಾಜಕೀಯ ದ್ರುವೀಕರಣವಾಗುತ್ತಿದೆ. ಸದ್ಯಕ್ಕೆ ಘೋಷಣೆಯಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಸೆಮಿಫೈನಲ್ ಆಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಮರಳಲಿದೆ ಎಂದರು.

ರಾಮಣ್ಣ ಲಮಾಣಿ ಬಿಜೆಪಿಯಿಂದ ಎರಡು ಬಾರಿ ಎಂಎಲ್ಎಧ ಆಗಿದ್ದರು, ಒಮ್ಮೆ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು, ಕಾಂಗ್ರೆಸ್ ತತ್ವಕ್ಕೆ ಬದ್ಧರಾಗಿ ಇಂದು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದರು.

Leave a Reply