ಕಾಂಗ್ರೆಸ್ ಕಾರ್ಯಕರ್ತರಿಂದ ಹಿಂದುಳಿದ ವರ್ಗಗಳ ನಾಯಕ ಮಧು ಬಂಗಾರಪ್ಪ ಹುಟ್ಟುಹಬ್ಬದ ಸಂಭ್ರಮಾಚರಣೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಹಿರಿಯ ರಾಜಕಾರಣಿ ಎಸ್.ಬಂಗಾರಪ್ಪರವರ ಪುತ್ರ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪರವರ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಕಾಂಗ್ರೆಸ್ ಭವನ, ಹಿಂದುಳಿದ ವರ್ಗಗಳ ವಿಭಾಗದ ಕಛೇರಿಯಲ್ಲಿ ಅಚರಿಸಿದರು.
ಕೆ.ಪಿ.ಸಿ.ಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ರಮೇಶ್ ಆದಿತ್ಯರವರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ರಮೇಶ್ ಆದಿತ್ಯ ಮಾತನಾಡಿ, ದೇಶದ ಶೇಕಡ 60%ರಷ್ಟು ಜನಸಂಖ್ಯೆ ಹಿಂದುಳಿದ ವರ್ಗ ಸಮುದಾಯವಿದೆ. ಕಾಂಗ್ರೆಸ್ ಪಕ್ಷದ ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗದ ಸಮುದಾಯದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿದ್ದಾರೆ. ಹಿಂದುಳಿದ ವರ್ಗದ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪರವರ ನೇತೃತ್ವದಲ್ಲಿ ಸಂಘಟನೆ ಯಶ್ವಸಿಯಾಗಿ ಸಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಮುಖಂಡರುಗಳಾದ ಶಿವಕುಮಾರ್, ಹನುಮಂತು, ರವೀಂದ್ರ, ವಿಜಯಕುಮಾರ್, ಭರತ್ ಪಾಲ್ಗೊಂಡಿದ್ದರು.




