ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 140 ಸ್ಥಾನಗಳಲ್ಲಿ ಜಯಿಸಲಿದೆ: ಸುದರ್ಶನ್

3 years ago

ಬೆಂಗಳೂರು: ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದ ಮೂಲಕ 140ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿ, ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಸಂಯೋಜಕ ಸುದರ್ಶನ್ ಹೇಳಿದರು.

ಕೆ.ಪಿ.ಸಿ.ಸಿ. ಸಂಯೋಜಕ ಸುದರ್ಶನ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಹಾಗಣಪತಿ, ಅಭಯ ಆಂಜನೇಯ ಸ್ವಾಮಿ ಸನ್ನಿಧಿ ಮತ್ತು ಪ್ರಕಾಶನಗರದ ಓಂ ಶಕ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರವರಿಗೆ ಜನರ ಆಶೀರ್ವಾದ ಲಭಿಸಲಿ ಎಂದು ವಿಶೇಷಪೂಜಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿಲ್ಲಿ ಮಾತಾಡಿದ ಸುದರ್ಶನ್, ಪ್ರಜ್ಞಾವಂತ ಮತದಾರರು ಇರುವ ರಾಜ್ಯ ನಮ್ಮದು. ಎ.ಐ.ಸಿ.ಸಿ. ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ಅವರ ನೇತೃತ್ವದಲ್ಲಿ ಜನಸೇವೆಯೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದರು.

ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರತಿಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ಆದೇಶ ಆನ್ವಯ ಇಂದಿನಿಂದ ನಮ್ಮ ಪ್ರಚಾರ ಕಾರ್ಯ ಆರಂಭವಾಗಿದೆ. ಎಲ್ಲ ವರ್ಗ, ಧರ್ಮದ ವರ್ಗದವರಿಗೆ ಸಾಮಾಜಿಕ ನ್ಯಾಯ ನೀಡಿ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಆದರ್ಶ ಸಿದ್ದಾಂತಗಳಿಂದ ಬಡವರ, ದೀನದಲಿತರ ಸೇವೆ ಮಾಡುತ್ತಿರುವ ಮತ್ತು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಪಕ್ಷ ಜನರ ಒಡನಾಡಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ರಾಜ್ಯದ ಜನತೆಗೆ ನೀಡಿದ 165 ಭರವಸೆಗಳನ್ನ ಈಡೇರಿಸಿದ ದೇಶದ ಮೊಟ್ಟ ಮೊದಲ ಸರ್ಕಾರ ನಮ್ಮದು. ಹಸಿವಿನಿಂದ ಯಾರೂ ಬಳಲಬಾರದು ಎಂದು ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್, ಕ್ಷೀರ ಭಾಗ್ಯ, ವಸತಿ ಯೋಜನೆ, ಪಶುಭಾಗ್ಯ, ಆರ್ಥಿಕವಾಗಿ ಹಿಂದುಳಿದ ಜನರನ್ನು ಸಮಾಜದ ಮುಖ್ಯವಾಹಿನಿ ತರಲು ಬಡವರ ಪರ ಯೋಜನೆಗಳನ್ನು ರೂಪಿಸಿ, ಆನುಷ್ಠಾನಗೊಳಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತದೆ ಎಂದರು.

ಜನಸೇವೆಯೆ ಸಂಕಲ್ಪ ಮಾಡಿ, ಜನತಾ ಆಶೀರ್ವಾದ ಪಡೆಯಲು ನಿಮ್ಮ ಮುಂದೆ ಬರುತ್ತಿದ್ದೇವೆ. ರಾಜ್ಯದಲ್ಲಿ ನವ ಇತಿಹಾಸ ನಿರ್ಮಿಸಲು, ಹೊಸ ಚಿಂತನೆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಇರಲಿ ಎಂದು ಮನವಿ ಮಾಡಿದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮನೆ, ಮನೆಗಳಿಗೆ ಇಂದಿನಿಂದ ಜನಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ, ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಲುಪಿಸಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಜನವಿರೋಧಿ ಬಿ.ಜೆ.ಪಿ. ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಜನರ ಆಶೀರ್ವಾದ ಮೂಲಕ 140ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿ, ಅಧಿಕಾರಕ್ಕೆ ಬರಲಿದೆ ಎಂದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಜನತಾ ಜನಾರ್ದನರ ಆಶೀರ್ವಾದ ಸಿಗಲಿ ಎಂದು ಮಾಜಿ ಶಾಸಕಿ ಪ್ರಫುಲ್ಲಾ ಮಧುಕರ್ ಹೇಳಿದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಜಯಕುಮಾರ್, ಶ್ರೀರಾಮಮಂದಿರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೆಂಕಟೇಶ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಧಾಕರ್, ಶಂಶೀರ್ ಬೇಗ್ ಭಾಗವಹಿಸಿದ್ದರು.

Leave a Reply