ಬೆಂಗಳೂರು: ಕೇವಲ ಮೂರು ಅಡಿ ಜಾಗಕ್ಕಾಗಿ ಇಡೀ ಕುಟುಂಬವನ್ನೇ ಬಲಿ ತೆಗೆದುಕೊಳ್ಳಲು ಸಂಚು ಮಾಡಿದ ಅಮಾನವೀಯತೆಯನ್ನು ಹೇಳುವ ಕತೆ ಇದು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ವಿಷ ಬೆರೆಸಿದ ಸಾಂಬಾರ್ ಸೇವಿಸಿ ಅಸ್ವಸ್ಥರಾಗಿದ್ದ 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರೇ ಆಗಿದ್ದಾರೆ. ಎರಡು ವರ್ಷಗಳ ಹಿಂದೆ ಇಬ್ಬರ ಮನೆಗಳ ನಡುವಿನ ಮೂರಡಿ ಖಾಲಿ ಜಾಗದ ಸಲುವಾಗಿ ಜಗಳವಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಚೌಡರೆಡ್ಡಿ ಎಂಬಾತನಿಗೆ ಸುಪಾರಿ ಕೊಟ್ಟ ಪಾಪಿರೆಡ್ಡಿ ಕುಟುಂಬದವರ ಆಹಾರದಲ್ಲಿ ವಿಷ ಬೆರೆಸುವಂತೆ ಹೇಳಿದ್ದ.
ಅದರತೆ ಮದ್ದರೆಡ್ಡಿಯ ಅಡುಗೆ ಮನೆಗೆ ನೀರು ಕುಡಿಯುವ ನೆಪದಲ್ಲಿ ತೆರಳಿದ್ದ ಚೌಡರೆಡ್ಡಿ, ಸಾಂಬಾರಿಗೆ ವಿಷದ ಪುಡಿಯನ್ನು ಬೆರೆಸಿದ್ದ. ಇದನ್ನರಿಯದ ಕುಟುಂಬಸ್ಥರು ಎಂದಿನಂತೆ ಊಟ ಮಾಡಿದ್ದು, ಮನೆ ಯಜಮಾನಿ ಮದ್ದಕ್ಕ ಹಾಗೂ ಇವರ ಇಬ್ಬರು ಮಕ್ಕಳಾದ ಮದ್ದರೆಡ್ಡಿ ಹಾಗೂ ಮಂಜುನಾಥ್ ಸೇರಿದಂತೆ ಮದ್ದರೆಡ್ಡಿ ಪತ್ನಿ ಭಾಗ್ಯಮ್ಮ, ಮಗಳು ಮಣಿ, ಮಂಜುನಾಥ್ ಪತ್ನಿ ಈಶ್ವರಮ್ಮ, ಮಂಜುನಾಥ್ ನ ಮಗ ಸುಬ್ರಮಣಿ, ಹಾಗೂ ಸಂಬಂಧಿ ಬಾಲಕಿ ಭಾನುಶ್ರೀ ಸೇರಿ ಎಂಟು ಮಂದಿ ಅಸ್ವಸ್ಥರಾಗಿದ್ದಾರೆ.
8 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಮಂಜುನಾಥ್ ಹಾಗೂ ಮದ್ದರೆಡ್ಡಿ ಸೇರಿದಂತೆ ಸುಬ್ರಮಣಿ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಉಳಿದ 5 ಜನ ಪ್ರಾಣಾಪಾಯದಿಂದ ಪಾರಾಗಿದ್ದರೂ ದೇಹದೊಳಗೆ ವಿಷ ಸೇರಿರುವುದರಿಂದ ಯಾವಾಗ ಏನಾಗುತ್ತದೆಂದು ಹೇಳಲಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದ್ದು, ಬಾಗೇಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಪ್ರಮುಖ ಆರೋಪಿಗಳಾದ ಪಾಪಿರೆಡ್ಡಿ ಹಾಗೂ ಚೌಡರೆಡ್ಡಿಯನ್ನು ಬಂಧಿಸಲಾಗಿದೆ.




