ಬಿಜೆಪಿ, ಜೆಡಿಎಸ್ ವಿರುದ್ಧ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ವತಿಯಿಂದ ಮೌನ ಪ್ರತಿಭಟನೆ
ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ಮುಖ್ಯಮಂತ್ರಿ ಅವರನ್ನು ರಾಜಕೀಯವಾಗಿ ಮುಗಿಸಲು ನಡೆಯುತ್ತಿರುವ ಷಡ್ಯಂತ್ರ ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನ ವಿರೋಧಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಅಧ್ಯಕ್ಷರಾದ ಎಂ.ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್, ಮಾಜಿ ಮೇಯರ್ ವೆಂಕಟೇಶಮೂರ್ತಿ, ಕುರುಬರ ಸಂಘದ ನಿರ್ದೇಶಕ ರಾಮಕೃಷ್ಣ, ಎಮ್.ಶಿವರಾಜು ದಲಿತ ಪರ ಹೋರಾಟಗಾರರು, ಪ್ರಗತಿಪರ ಚಿಂತಕರು, ಶೋಷಿತ ಸಮುದಾಯದ ಮುಖಂಡರುಗಳು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕಳೆದ 40 ವರ್ಷಗಳಿಂದ ಸಾರ್ವಜನಿಕರ ಸೇವೆಯಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಸಾರ್ವಜನಿಕರ ಸೇವೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ವಾಗ್ದಾಳಿ ನಡೆಸಿದರು.
ಬಿಜೆಪಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳು ಮುಡಾ ಪ್ರಕರಣದಲ್ಲಿ ಏನೂ ಪಾತ್ರವಿಲ್ಲದ ಸಿದ್ದರಾಮಯ್ಯರವರ ವಿರುದ್ಧ ಆರೋಪ ಮಾಡಿ, ಕಾಂಗ್ರೆಸ್ ಸರ್ಕಾರ ಉರುಳಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪರ ನಾಡಿನ ಜನರು ನಿಂತಿದ್ದಾರೆ. ಶೋಷಿತರ ಧ್ವನಿಯಾಗಿರುವ ಸಿದ್ದರಾಮಯ್ಯರವರ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ನಡೆ ವಿರುದ್ಧ ನಮ್ಮ ಮೌನ ಪ್ರತಿಭಟನೆ ಎಂದರು.




