ಬೆಂಗಳೂರು: ಹಿಂದೂ ಜಾತಿಗಳ ನಡುವೆ ಕ್ರೈಸ್ತರನ್ನು ನುಗ್ಗಿಸುವ ಹುನ್ನಾರ ಎಚ್ಚರ, ಹಿಂದೂ ಜನಸಂಖ್ಯೆ ಕುಗ್ಗಿಸಲು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಯಳವ ಸಮಾಜದ ಮುಖಂಡ ಗೋವಿಂದರಾಜು, ಮಡಿವಾಳ ಸಮುದಾಯದ ರಾಜ್ಯ ಸಂಚಾಲಕ ಅಂಜಿರಪ್ಪ, ತಿಗಳರ ಸಮುದಾಯದ ರಾಜ್ಯ ಸಂಚಾಲಕ ಶ್ರೀಧರ್, ನೇಕಾರರ ಒಕ್ಕೂಟದ ರಾಜ್ಯ ಅಧ್ಯಕ್ಷ ಸೋಮಶೇಖರ್ ಮತ್ತು ವಿಶ್ವಕರ್ಮ ಸಮಾಜದ ಬಾಬುಪತ್ತಾರ್, ರಜಪೂತ ಸಮಾಜದ ಪವನ್ ಕುಮಾರ್, ಮರಾಠ ಸಮಾಜ ಗಣೇಶ್ ರಾವ್ ಕೇಸರ್ ಕರ್ ಸುದ್ದಿಗೋಷ್ಠಿ ನಡೆಸಿದರು.
ಎಸ್.ಹರೀಶ್ ಮಾತನಾಡಿ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜನೆಯನ್ನು ಕಾಂಗ್ರೆಸ್ ಪಕ್ಷ ಮಾಡಿತು. ಸಾರ್ವಜನಿಕರ ತೆರಿಗೆ ಹಣದಿಂದ ಕಾಂತರಾಜ್ ವರದಿಗೆ 167ಕೋಟಿ ರೂಪಾಯಿ ಖರ್ಚು ಮಾಡಿತು ಕಾಂಗ್ರೆಸ್ ಸರ್ಕಾರ. ಆದರೆ ಕಾಂತರಾಜ್ ವರದಿ ಎಲ್ಲಿ ಹೋಯಿತು ಎಂಬುದು ತಿಳಿಯದಾಗಿದೆ ಎಂದರು.
ಇದೀಗ ಹಿಂದುಳಿದ ವರ್ಗದ ಜನಗಣತಿ ಆರಂಭಿಸಿದ್ದಾರೆ. ಕ್ರೈಸ್ತರಲ್ಲಿ ಎರಡು ಜಾತಿಗಳಿಗೆ ಲಿಂಗಾಯಿತ ಕ್ರೈಸ್ತರು, ನೇಕಾರ ಕ್ರೈಸ್ತ, ಕುಂಬಾರ ಕ್ರೈಸ್ತರು ಹಲವಾರು ಜಾತಿಗಳಲ್ಲಿ ಕ್ರೈಸ್ತರು ಎಂದು ಸೇರ್ಪಡೆ ಮಾಡಿದ್ದಾರೆ. ಧರ್ಮ ಬದಲಾಯಿಸಬೇಕು ಎಂದರೆ ಜಿಲ್ಲಾಧಿಕಾರಿ ಮುಂದೆ ಅರ್ಜಿ ಸಲ್ಲಿಸಬೇಕು. ಆದರೆ ರಾಜ್ಯ ಸರ್ಕಾರ ಏಕಾಏಕಿ ಕ್ರೈಸ್ತರಾಗಿ ಸೇರ್ಪಡೆ ಮಾಡಿದ್ದಾರೆ. ಸೋನಿಯಾ ಗಾಂಧಿ ಮೆಚ್ಚಿಸಲು ಕಾಂಗ್ರೆಸ್ ಸರ್ಕಾರ ಹುನ್ನರ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಸಪ್ತಗಿರಿಗೌಡ ಮಾತನಾಡಿ, ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ಮಾರಕವಾಗಿದೆ. ಜನವಿರೋಧಿ ಆಡಳಿತದಿಂದ ಜನ ಬೇಸತ್ತಿದ್ದಾರೆ. ತಾಯಿ ಭುವನೇಶ್ವರಿ ಕುರಿತು ಅಭಿಮಾನವಿಲ್ಲದ ಭಾನು ಮುಷಾಕ್ತ್ ರವರನ್ನು ಮೈಸೂರು ದಸರಾ ಉದ್ಘಾಟನೆ ಮಾಡಿಸುತ್ತಿರುವುದು ಖಂಡನೀಯ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಸೋಮಶೇಖರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸರ್ಕಾರ ಹಿಂದೂ ಒಡೆದು ಆಳುವ, ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗದ ಸಮುದಾಯವನ್ನು ಕ್ರೈಸ್ತ ಸಮಾಜಕ್ಕೆ ಸೇರ್ಪಡೆ ಮಾಡಿ ಹಿಂದೂಗಳ ಜನಸಂಖ್ಯೆ ಕಡಿಮೆ ಮಾಡುತ್ತಿದೆ. ಹಿಂದುಳಿದ ವರ್ಗದ ಎಲ್ಲ ಸಮಾಜಗಳನ್ನು ತುಳಿಯುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರ, ಮೀಸಲಾತಿ ಕಿತ್ತುಕೊಳ್ಳಲು ಪ್ರಯುತ್ನ ಮಾಡುತ್ತಿದೆ. 200ಕ್ಕೂ ಹೆಚ್ಚು ಹಿಂದುಳಿದ ವರ್ಗದ ಸಮಾಜದವರು ಸಂಘಟನೆಯಾಗಿ ಕಾಂಗ್ರೆಸ್ ಪಕ್ಷದ ಸರ್ಕಾರ ವಿರುದ್ದ ಹೋರಾಟ ಮಾಡಲಾಗುವುದು. ಕುರುಬ ಸಮಾಜವನ್ನು ಕ್ರೈಸ್ತ ಸಮುದಾಯವಾಗಿ ಮಾರ್ಪಡು ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದರು.



