ಬೆಂಗಳೂರು: ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ವಾಗ್ದಾಳಿ ನಡೆಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದರು.
ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ ಎಂದರು.
ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು, ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದರು.
ಕೇಂದ್ರ ಸರಕಾರ ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದರು.
ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದರು.




