ಕಲಬುರಗಿ: ರಾಜ್ಯದ ಸಂಸದರೊಬ್ಬರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ದೇಶ ಒಪ್ಪುವ ಸಂವಿಧಾನ ತಿದ್ದುಮಾಡಿ ಮಾಡುವುದಾಗಿ ಘಂಟಾಘೋಷವಾಗಿ ಹೇಳುತ್ತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದ ಎ.ಸಿ.ಸಿ. ಕಂಪನಿ ಗೇಟ್ ಆವರಣದಲ್ಲಿ ಆಯೋಜಿಸಿದ ಕಲಬುರಗಿ ಜಿಲ್ಲಾ ಮಟ್ಟದ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದೂ ಮಾತನಾಡಿದ ಅವರು, ಸಂವಿಧಾನ ರಕ್ಷಣೆಗೆ ಹಿಂದಿಗಿಂತ ಹೆಚ್ಚು ನಾವೆಲ್ಲರು ಇದೀಗ ಮುಂದಾಗಬೇಕಿದೆ ಎಂದು ಕರೆನೀಡಿದರು.
ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಚುನಾವಣಾ ಪೂರ್ವ ಘೋಷಣೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಜಾರಿಗೊಳಿಸಿದ್ದೇವೆ. ನಾಡಿನ ಯುವ ಜನರು, ಮಹಿಳೆಯರ ಏಳಿಗೆಗೆ ಬದ್ಧವಾಗಿದ್ದೇವೆ. ಇದಕ್ಕಾಗಿ ಜನರ ದುಡ್ಡನ್ನು ಜನರ ಬಾಗಿಲಿಗೆ ನೀಡುತ್ತಿದ್ದೇವೆ ಎಂದರು.




