ಮೋದಿ ಅವಧಿಯಲ್ಲಿ ವಿಪಕ್ಷಗಳ ನಾಯಕರ ಮೇಲೆ ನಡೆದ ED ದಾಳಿ ಎಷ್ಟು?

2 years ago

ಬೆಂಗಳೂರು: ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, Bharatiya Janata Party (BJP) ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ಅವರ ಅವಧಿಯಲ್ಲಿ ED ದಾಳಿ ಪ್ರಕರಣಗಳು

ಜಾರ್ಖಂಡ್ ಸಿಎಂ ಆಗಿದ್ದ ಹೇಮಂತ್ ಸೊರೇನ್ ವಿರುದ್ಧ ನಡೆಯುತ್ತಿರುವ ವಿಚಾರಣೆಗಳ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದರು. ಅನಂತರ ಅವರನ್ನು ಬಂಧಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದಿದ್ದಾರೆ.

ಇಡಿ ದಾಳಿ ಕಾರಣದಿಂದ ಜಾರ್ಖಂಡ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಹೇಮಂತ್ ಸೊರೇನ್ ಅವರಿಂದ ತೆರವಾದ ಶಾಸಕಾಂಗ ಪಕ್ಷದ ನಾಯಕರಾಗಿ ಚಂಪೈ ಸೊರೇನ್ ಆಯ್ಕೆಯಾಗಿದ್ದರು. ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕುಮಂಡಿಸಿ 24 ಗಂಟೆ ಕಳೆದರೂ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ. ಇಂದು ಅವರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು ಬಹುಮತ ಸಾಬೀತಿಗೆ 10 ದಿನಗಳ ಕಾಲ ಕಾಲಾವಕಾಶ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Leave a Reply