ಬೆಂಗಳೂರು: ಕಾಂಗ್ರೆಸ್ ಆರಂಭಿಸಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಬಿಜೆಪಿ ಸಂವಿಧಾನ ಸಮ್ಮಾನ್ ಹೆಸರಿನಲ್ಲಿ ಸಮಾವೇಶಗಳನ್ನು ಆಯೋಜಿಸಲು ತೀರ್ಮಾನಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಆಡಿದ ಮಾತನ್ನು ಬಳಸಿಕೊಂಡು ಕಾಂಗ್ರೆಸ್ ದೇಶಾದ್ಯಂತ ಬಿಜೆಪಿ ವಿರುದ್ಧ ಆಂದೋಲನ ಮಾಡುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕದಲ್ಲಂತೂ ವಿವಿಧ ಜಿಲ್ಲೆಗಳಲ್ಲಿ ಬಂದ್ ಆಚರಿಸುವ ಮೂಲಕ ಬಿಜೆಪಿ ವಿರುದ್ಧ ಸಮರ ಘೋಷಿಸಿದೆ.
ಜೊತೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಗಳ ಮೂಲಕ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಜನಜಾಗೃತಿ ಆಂದೋಲನಕ್ಕೆ ಕರೆ ನೀಡಲಾಗಿದೆ. ಇದು ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಬಿಜೆಪಿ ಇದೀಗ ಸಂವಿಧಾನ ಸಮ್ಮಾನ್ ಹೆಸರಿನಲ್ಲಿ ರಾಜ್ಯಾದ್ಯಂತ ಸರಣಿ ಸಭೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ರಾಜ್ಯಾದ್ಯಂತ ಪ್ರತಿ ಮಂಡಲ ವ್ಯಾಪ್ತಿಯಲ್ಲಿ ಸಂವಿಧಾನ ಸಮ್ಮಾನ್ ಸಮಾವೇಶಗಳನ್ನು ನಡೆಸಬೇಕು ಈ ಮೂಲಕ ಕಾಂಗ್ರೆಸ್ ಅವಧಿಯಲ್ಲಿ ಎಷ್ಟು ಬಾರಿ ಸಂವಿಧಾನ ತಿದ್ದುಪಡಿ ಮಾಡಲಾಗಿದೆ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಯಾವ ಪ್ರಮಾಣದ ಅವಮಾನ ಮಾಡಿದೆ ಎಂಬುದನ್ನು ಕೂಲಂಕುಶವಾಗಿ ವಿವರಿಸುವ ಮೂಲಕ ಕಾಂಗ್ರೆಸ್ಸಿನ ಆಂದೋಲನ ಜನರಿಗೆ ಮುಟ್ಟದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಂತಿಮವಾಗಿ ಜನವರಿ 15ರಿಂದ ಜನವರಿ 26ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಂವಿಧಾನ ಸಮ್ಮಾನ್ ಸಮಾವೇಶಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.




