ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಆಟದ ಮೈದಾನದಲ್ಲಿ ಮಂಡಲ ಬಿಜೆಪಿ ಯುವ ಮೋರ್ಚಾ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಫುಟ್ ಬಾಲ್ ಅಕಾಡೆಮಿ ಸಹಯೋಗದಲ್ಲಿ ರಾಜ್ಯಮಟ್ಟದ ಅಂಬೇಡ್ಕರ್ ಕಪ್-2025 ಪುಟ್ ಬಾಲ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಬಿಜೆಪಿ ನಗರ ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಫುಟ್ ಬಾಲ್ ಹೊಡೆಯುವ ಮೂಲಕ ಪಂದ್ಯಗಳಲಿಗೆ ಚಾಲನೆ ನೀಡಿದರು.
ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿರವರು ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ, ಸಹಕಾರ ನೀಡುತ್ತಿದ್ದರು. ಅದೇ ಹಾದಿಯಲ್ಲಿ ಪ್ರಧಾನಿ ನರೇಂದ್ರಮೋದಿರವರು ನೀಡಿದ ಸಹಕಾರದಿಂದ ಭಾರತೀಯ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಎಂಬ ಪವಿತ್ರಗ್ರಂಥವನ್ನು ನಮ್ಮ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಸಪ್ತಗಿರಿಗೌ ಮಾತನಾಡಿ, ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಡಾ.ಬಿ.ಆರ್.ಅಂಬೇಡ್ಕರ್ ಕಪ್ ಫುಟ್ಬಾಲ್ ಬಾಲ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಮಾನಸಿಕ, ದೃಹಿಕವಾಗಿ ಆರೋಗ್ಯವಂತರಾಗಿ ಇರಲು ಕ್ರೀಡಾ ಚಟುವಟಿಕೆಗಳಲ್ಲಿ ಎಲ್ಲರು ಭಾಗವಹಿಸಬೇಕು. ರಾಜಾಜಿನಗರ, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ, ರಾಜ್ಯ ಮಟ್ಟದ ಫುಟ್ಬಾಲ್ ಕ್ರೀಡಾಪಟುಗಳು ಇದ್ದಾರೆ. ಅವರಿಗೆ ಉತ್ತಮ ಕ್ರೀಡಾಂಗಣ ಇದೆ. ಇಲ್ಲಿ ಅಭ್ಯಾಸ ಮಾಡಬಹುದು ಎಂದರು.
ಭಾರತರತ್ನ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಸ್ಮರಣೆಯಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಫುಟ್ ಬಾಲ್ ಪಂದ್ಯವು ಹೊನಲು ಬೆಳಕಿನ ಪಂದ್ಯವಾಗಿದೆ.
ಪ್ರಥಮ ಬಹುಮಾನ 75 ಸಾವಿರ, ದ್ವೀತಿಯ ಬಹುಮಾನ 50 ಸಾವಿರ ಹಾಗೂ ತೃತೀಯ ಬಹುಮಾನ 10 ಸಾವಿರ ರೂಪಾಯಿ ನಗದು ಪುರಸ್ಕಾರ ನೀಡಲಾಗುವುದು.
ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಿರಿಯ ಫುಟ್ ಬಾಲ್ ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು.
ಬಿಬಿಎಂಪಿ ಮಾಜಿ ಸದಸ್ಯ ಎಂ.ಮುನಿರಾಜು, ಮಾಜಿ ಮೇಯರ್ ರಂಗಣ್ಣ, ಪಾಲಿಕೆ ಮಾಜಿ ಸದಸ್ಯ ರಾಜಣ್ಣ, ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್.ಸಂಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರರಾವ್, ಮಂಡಲ ಅಧ್ಯಕ್ಷ ಸುದರ್ಶನ್, ಬಿಜೆಪಿ ಮುಖಡರಾದ ಕಾಮಧೇನು ಸುರೇಶ್ ಮೊದಲಾದವರು ಹಾಜರಿದ್ದರು.










