ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ನಲ್ಲಿ ಕಳೆದ ವಾರಾಂತ್ಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿದ್ದ ಇಬ್ಬರು ತೆಲುಗು ನಟಿಯರು ಸೇರಿದಂತೆ 86 ಜನ ಮಾದಕವಸ್ತು ಸೇವಿಸಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಉದ್ಯಮಿಯೊಬ್ಬರ ಒಡೆತನದಲ್ಲಿರುವ ಜಿ.ಆರ್.ಫಾರ್ಮ್ ಹೌಸ್ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ತನ್ನ ಹುಟ್ಟುಹಬ್ಬದ ನಿಮಿತ್ತ ಭಾನುವಾರ ಸಂಜೆ 5 ಗಂಟೆಯಿಂದ ಅಂದರೆ ಸನ್ಸೆಟ್ ಟೂ ಸನ್ ರೈಸ್ ಪಾರ್ಟಿ ಆಯೋಜಿಸಿದ್ದರು.
ಅವಧಿ ಮುಗಿದ ಬಳಿಕವೂ ಬೆಳಗಿನ ಜಾವ 2 ಗಂಟೆಯಾದರೂ ಪಾರ್ಟಿ ನಡೆಸುತ್ತಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದಾಗ ಮೂವರು ಡ್ರಗ್ ಪೆಡ್ಲರ್ಗಳು ಸಿಕ್ಕಿಬಿದ್ದಿದ್ದಾರೆ.
ಇದೇ ಸಂದರ್ಭದಲ್ಲಿ 15.56 ಗ್ರಾಂ ಎಂಡಿಎಂಎ ಡ್ರಗ್ಸ್ , 6.2 ಗ್ರಾಂ ಕೊಕೇನ್, 6 ಗ್ರಾಂ ಹೈಡ್ರೋ ಗಾಂಜಾ, 5 ಮೊಬೈಲ್ ಫೋನ್ ಹಾಗೂ 2 ವಾಹನಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿಯವರೆಗೂ ಒಟ್ಟು 5 ಜನರನ್ನು ಬಂಧಿಸಿದ್ದಾರೆ.
ಪಾರ್ಟಿಯಲ್ಲಿ ಡ್ರಗ್ಸ್ ಬಳಕೆಯಾಗಿರುವುದು ಕಂಡುಬಂದ ಹಿನ್ನಲೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಲ್ಲರ ರಕ್ತದ ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, 86 ಜನ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ.
ರೇವ್ ಪಾರ್ಟಿಯಲ್ಲಿ 103 ಜನ ಪಾಲ್ಗೊಂಡಿದ್ದು, 73 ಪುರುಷರ ಪೈಕಿ 59 ಹಾಗೂ 30 ಯುವತಿಯರ ಪೈಕಿ 27 ಜನ ಮಾದಕವಸ್ತು ಸೇವಿಸಿರುವುದು ಧೃಡಪಟ್ಟಿದೆ. ಜತೆಗೆ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಡ್ರಗ್ಸ್ ಬಳಕೆಯಾಗಿರುವುದು ತನಿಖೆಯಿಂದ ದೃಢಪಟ್ಟಿದ್ದು, ಸಿಸಿಬಿ ಪೊಲೀಸರು ಡ್ರಗ್ ಸೇವನೆ ಮಾಡಿರುವ ನಟಿಯರೂ 86 ಮಂದಿಗೂ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.




