ಬೆಂಗಳೂರು: ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಸಯ್ಯದ್ ಗೌಸ್ ಮೋಹಿದ್ದೀನ್ ಶಾಖಾದ್ರಿ ಅವರಿಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದ್ದರೂ ರಾಜ್ಯ ಸರ್ಕಾರ ಅದನ್ನು ಮನ್ನಿಸದೆ ಅಲ್ಲಿ ಉರುಸ್ ಮಾಡಲು ಅವಕಾಶ ನಿರಾಕರಿಸಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಎಂದಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಸಯ್ಯದ್ ಗೌಸ್ ಮೋಹಿದ್ದೀನ್ ಶಾಖಾದ್ರಿ ಅವರಿಗೆ ಸುಪ್ರೀಂಕೋರ್ಟ್ ಮದ್ಯಂತರ ಆದೇಶದ ಮೂಲಕ ಉರುಸ್ ಮತ್ತು ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಿದ್ದರೂ ಸ್ಥಳೀಯ ಆಡಳಿತ ಮತ್ತು ರಾಜ್ಯ ಸರ್ಕಾರ ಕೋರ್ಟಿನ ಆದೇಶಕ್ಕೆ ಕಿಂಚಿತ್ತೂ ಬೆಲೆ ಕೊಡದೆ ಅಲ್ಲಿ ಉರುಸ್ ಮಾಡಲು ಅವಕಾಶ ನಿರಾಕರಸಿದೆ. ಈ ಮೂಲಕ ಸರ್ಕಾರ ನ್ಯಾಯಾಂಗ ನಿಂದನೆ ಎಸಗಿದೆ ಎಂದಿದ್ದಾರೆ.
ಬಾಬಾ ಬುಡನ್ ಗಿರಿ ವಿಚಾರದಲ್ಲಿ ಕೋಮುವಾದಿ ಬಿಜೆಪಿಯಂತೆ ಕಾಂಗ್ರೆಸ್ ಸರ್ಕಾರವೂ ಸಹ ಮುಸ್ಲಿಂ ಸಮುದಾಯವನ್ನು ವಂಚಿಸುತ್ತಲೇ ಬರುತ್ತಿದೆ. ಮುಸ್ಲಿಮರ ಹಿತ ಕಾಯುವ ಬೊಗಳೆ ಆಶ್ವಾಸನೆಗಳನ್ನು ನೀಡುವ ಮೂಲಕ ಮುಸ್ಲಿಮರ ಶೇ.97% ಮತ ಪಡೆದ ಕಾಂಗ್ರೆಸ್ ಈ ರೀತಿಯಲ್ಲಿ ಮುಸ್ಲಿಮರ ಬೆನ್ನಿಗೆ ಚೂರಿ ಹಾಕುತ್ತಿದೆ ಇದಕ್ಕೆ ಕಾಂಗ್ರೆಸ್ ಭಾರೀ ಬೆಲೆ ತೆರಲಿದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶವನ್ನೂ ಧಿಕ್ಕರಿಸುವ ಮಟ್ಟಕ್ಕೆ ಕಾಂಗ್ರೆಸ್ ಸರ್ಕಾರ ಇಳಿಯಲು ಕಾರಣ ಏನು? ಸಂಘಪರಿವಾರಕ್ಕೆ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಸರ್ಕಾರ ಈ ಮಟ್ಟಕ್ಕೆ ಏಕೆ ಹೆದರುತ್ತಿದೆ? ಎಂಬುದಕ್ಕೆ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು. ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಈ ಮಟ್ಟಕ್ಕೆ ಹೆದರುವ ಸರ್ಕಾರವನ್ನು ನಾವು ಎಂದೂ ನೋಡಿರಲಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.




