ಬೆಂಗಳೂರು: ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರು ತಮ್ಮ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಹಲವು ಸಚಿವರಿಗೆ ಪತ್ರ ಬರೆದಿದ್ದಾರೆ.
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
ರಾಜ್ಯಾದ್ಯಂತ ಸರ್ಕಾರದ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸುಮಾರು 30 ಸಾವಿರ ಕೋಟಿ ಬಿಲ್ ಬಾಕಿ ನೀಡಬೇಕಾಗಿದೆ. ಈ ಬಗ್ಗೆ ತಕ್ಷಣ ಸಭೆ ಕರೆದು ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಅವರಿಗೆ ಪತ್ರ ಬರೆಯಲಾಗಿದೆ.
ರಾಜ್ಯ ಗುತ್ತಿಗೆದಾರ ಸಂಘದ ಹಂಗಾಮಿ ಅಧ್ಯಕ್ಷ ಜಗನ್ನಾಥ್ ಬಿ. ಶೇಗಜಿ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ಪತ್ರ ಬರೆದಿದ್ದು, ಪತ್ರ ತಲುಪಿದ ಏಳು ದಿನಗಳಲ್ಲಿ ಸಭೆ ಕರೆದು ಗುತ್ತಿಗೆದಾರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಮುಂದಿನ ಹೋರಾಟ ಆರಂಭಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.




