ವೈದ್ಯಕೀಯ ಕ್ಷೇತ್ರದ ಸಾಧನೆಗೆ ಕಾಂಗ್ರೆಸ್ ಕೊಡುಗೆ ಅಪಾರ: ಎಂ.ಶಿವರಾಜು

3 years ago

ಬೆಂಗಳೂರು: ಕಾಂಗ್ರೆಸ್ ಪಕ್ಷ ಬಡವರ ಪರ ಸದಾ ಶ್ರಮಿಸುವ, ದುಡಿಯುವ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕ ಡಾ.ನಾರಾಯಣಸ್ವಾಮಿ ಹೇಳಿದರು.

ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠ ವಾರ್ಡ್, ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ಪಂದನ ಕ್ರೀಡಾ ಸಾಂಸ್ಕೃತಿಕ ವೇದಿಕೆ ವತಿಯಿಂದ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತಾಡಿದ ಅವರು, ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಶ್ರಮಿಕವರ್ಗ ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ. ವೈದ್ಯಕೀಯ ತಪಾಸಣೆ, ಪರೀಕ್ಷೆ ಮಾಡಿಸಿಕೊಳ್ಳಲು ಆರ್ಥಿಕವಾಗಿ ಸಬಲರಾಗಿ ಇರುವುದಿಲ್ಲ, ಅವರ ಆರೋಗ್ಯ ರಕ್ಷಣೆಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದರು.

ಹೃದಯ, ನೇತ್ರ, ಹರ್ನಿಯಾ ಇನ್ನಿತರ ಶಸ್ತ್ರಚಿಕಿತ್ಸೆಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ನಮ್ಮ ಆಸ್ಪತ್ರೆಯಲ್ಲಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಲ್ತ್ ಇನ್ಯೂರೆನ್ಸ್ ಉಚಿತವಾಗಿ ಮಾಡಿಕೊಡಲಾಗುವುದು ಎಂದರು.

ಮಹಾನಗರಪಾಲಿಕೆ ಮಾಜಿ ಸದಸ್ಯ ಎಮ್.ಶಿವರಾಜು ಮಾತನಾಡಿ, ಇಂದು ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವವಾದ ಸಾಧನೆ ಮಾಡಿದ್ದರೆ ಅದು ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಬಹುದು. ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಬಡವರ ಆರೋಗ್ಯ ರಕ್ಷಣೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುನ್ನುಡಿ ಬರೆದರು. ಉಚಿತ ಆರೋಗ್ಯ ಶಿಬಿರದಲ್ಲಿ ಸಕ್ಕರೆ ಖಾಯಿಲೆ, ಬಿ.ಪಿ. ಮತ್ತು ಇ.ಸಿ.ಜಿ. ಎಕೋ ಮತ್ತು ನೇತ್ರ ತಪಾಸಣೆ ಹಾಗೂ ಉಚಿತವಾಗಿ ಔಷಧಿ ವಿತರಣೆ ಮತ್ತು ಕನ್ನಡಕ ನೀಡಲಾಗುತ್ತಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪರಿಸರ ರಾಮಕೃಷ್ಣ, ಸುಧೀಂದ್ರ, ನಟರಾಜ್, ಬಿ.ಬಿ.ಎಂ.ಪಿ. ಮಾಜಿ ಸದಸ್ಯ ಎಸ್.ಕೇಶವಮೂರ್ತಿ ಮೊದಲಾದವರು ಹಾಜರಿದ್ದರು.

ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 700ಕ್ಕೂ ಜನ ತಪಾಸಣೆಗೆ ಒಳಗಾದರು.

Leave a Reply