ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಓ ಭೇಟಿ, ವೀಕ್ಷಣೆ
ಬಳ್ಳಾರಿ: ಕೂಲಿಕಾರ್ಮಿಕರು ಮೇ 7 ರಂದು ತಪ್ಪದೇ ಮತದಾನ ಮಾಡಬೇಕು. ಹಣದ ಆಮಿಷಗಳಿಗೆ ಒಳಗಾಗಬಾರದು, ನಿಮ್ಮ ಅಮೂಲ್ಯವಾದ ಮತವನ್ನು ಮಾರಿಕೊಳ್ಳಬಾರದು ಎಂದು ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಳ್ಳಾರಿ ತಾಲ್ಲೂಕಿನ ಸಂಜೀವರಾಯನಕೋಟೆ ಗ್ರಾಪಂ ವ್ಯಾಪ್ತಿಯ ಮಿಂಚೇರಿ ಗ್ರಾಮದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಅನುಷ್ಠಾನ ಮಾಡಿರುವ ನಾಲಾ ಪುನಶ್ಚೇತನ ಕಾಮಗಾರಿ ಮತ್ತು ಹಲಕುಂದಿ ಗ್ರಾಪಂ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿಯ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಮಿಂಚೇರಿ ಗ್ರಾಮದಲ್ಲಿ ಶೇ.100 ರಷ್ಟು ಮತದಾನ ಆಗಬೇಕು. ಮತದಾನ ದಿನದಂದು ಯಾರೂ ತಪ್ಪಿಸಬಾರದು. ನಿಮ್ಮ ಮತ- ನಿಮ್ಮ ಹಕ್ಕು ಎಂದು ಮನವಿ ಮಾಡಿದರು.
ಕೆಲಸಕ್ಕಾಗಿ ಬೇರೆ ಕಡೆ ವಲಸೆ ಹೋಗದಂತೆ, ನಿಮ್ಮ ಗ್ರಾಮದಲ್ಲಿ ಕೆಲಸ ನೀಡಲಾಗುತ್ತಿದೆ. ಎಲ್ಲರು ನರೇಗಾ ಯೋಜನೆಯಡಿ ನೀಡುವ ಕಾಮಗಾರಿ ಕೆಲಸಕ್ಕೆ ಬರಬೇಕು ಎಂದರು.
ಕೂಲಿಕಾರರಿಗೆ ಕೂಲಿ ಮತ್ತು ಅಳತೆಯ ಬಗ್ಗೆ ಮಾಹಿತಿ ಅವರು, ಬಿಸಿಲು ಹೆಚ್ಚಿರುವುದರಿಂದ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೂಲಿಕಾರ್ಮಿಕರೊಂದಿಗೆ ಮತದಾನ ಜಾಗೃತಿ ಮತ್ತು ಪ್ರತಿಜ್ಞಾವಿಧಿ ಬೋಧಿಸಿದರು.
ಬಳಿಕ ಹಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚೆಕ್ ಡ್ಯಾಮ್‍ನಲ್ಲಿ ಹೂಳು ತೆಗೆಯುವ ಕಾಮಗಾರಿ ವೀಕ್ಷಣೆ ನಡೆಸಿದರು. ನಂತರದಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿ ಪರಿಶೀಲನೆ ನಡೆಸಿದರು. ಹೊನ್ನಳ್ಳಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದಅನುಷ್ಠಾನಕ್ಕೆ ತಂದ ಡ್ರ್ಯಾಗನ್ ಫ್ರೂಟ್ ಬೆಳೆ ವೀಕ್ಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಕೂಲಿಕಾರರಿಗೆ ಮತದಾನದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಆರ್.ಕೆ.ಬಸವರಾಜ್ ಸೇರಿದಂತೆ ಟಿಸಿ, ಟಿಎಂಐಎಸ್, ಟಿಐಇಸಿ, ಪಿಡಿಓ, ಟಿಎಇ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.




