ಕುಕ್ಕರ್ ಬಾಂಬ್ ಸ್ಫೋಟ: 3 ರಾಜ್ಯಗಳಲ್ಲಿ NIA ತನಿಖೆ

3 years ago

ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಸ್ಫೋಟ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕರ್ನಾಟಕ ಸೇರಿ ಮೂರು ರಾಜ್ಯಗಳ ದಾಳಿ ನಡೆಸಿದ್ದಾರೆ.
ಕಳೆದ ವರ್ಷದ ಕೊಯಮುತ್ತೂರು ಹಾಗೂ ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ 60 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದು ಕರ್ನಾಟಕದಲ್ಲಿ 40 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಿ  ಎಲೆಕ್ಟ್ರಾನಿಕ್ ಡಿವೈಸ್ಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
ತಮಿಳುನಾಡಿನ ಕೊಯಮುತ್ತೂರಿನ ಕೊಟ್ಟಯ್ ಈಶ್ವರನ್ ದೇವಸ್ಥಾನ ಎದುರುಗಡೆ ಸ್ಪೋಟಗೊಂಡ ಕಾರ್ ಸ್ಫೋಟದಲ್ಲಿ ಜಮೀಶ್ ಮುಬೀನ್ ಎಂಬುವನು ಸಾವನ್ನಪ್ಪಿದ್ದನು. ಮೃತ ಜಮೇಶಾ ಮುಬೀನ್ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್‌ನೊಂದಿಗೆ ಗುರುತಿಸಿಕೊಂಡಿದ್ದ. ಭಯೋತ್ಪಾದನೆ ಸೃಷ್ಟಿಸುವ ಸಲುವಾಗಿ ಆತ್ಮಾಹುತಿ ದಾಳಿ ನಡೆಸಲು ಮತ್ತು ದೇವಾಲಯದ ಸಂಕೀರ್ಣಕ್ಕೆ ವ್ಯಾಪಕ ಹಾನಿಯನ್ನುಂಟುಮಾಡಲು ಯೋಜಿಸಿದ್ದ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಕಳೆದ ವರ್ಷ ಅಕ್ಟೋಬರ್ 23 ರಂದು ತಮಿಳನಾಡಿನ 43 ಸ್ಥಳಗಳಲ್ಲಿ ದಾಳಿ ನಡೆಸಿ ಮಾಹಿತಿಯನ್ನು ಸಂಗ್ರಹಿಸಿದ್ದರು.
ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ ಜೊತೆ ಜಮೀಶ್ ಮುಬೀನ್ ನಂಟು ಹೊಂದಿದ್ದು. ಈತ ಆತ್ಮಾಹುತಿ ಬಾಂಬ್ಗೆ ಧಾರ್ಮಿಕ ಕೇಂದ್ರಗಳು ಮತ್ತು ಸ್ಮಾರಕಗಳನ್ನು ಟಾರ್ಗೆಟ್ ಮಾಡಿದ್ದನು ಎಂದು ಎನ್‌ಐಎ ಹೇಳಿದೆ.
ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. ಅಧಿಕಾರಿಗಳು ಸ್ಫೋಟವನ್ನು “ಲೋನ್ ವುಲ್ಫ್” ದಾಳಿ ಎಂದು ಕರೆದಿದ್ದಾರೆ.
ಪ್ರಕರಣದಲ್ಲಿ ಬಂಧಿತ ಆರೋಪಿ ಉಮರ್ ಫಾರೂಕ್ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಮೃತ ಜಮೇಶಾ ಮುಬೀನ್ ಸೇರಿದಂತೆ ಮೊಹಮ್ಮದ್ ಅಜರುದ್ದೀನ್, ಶೇಖ್ ಹಿದಾಯತುಲ್ಲಾ ಮತ್ತು ಸನೋಫರ್ ಅಲಿ ಭಾಗವಹಿಸಿದ್ದರು.
ಎಲ್ಲರೂ ಭಯೋತ್ಪಾದಕ ಕೃತ್ಯಗಳಿಗೆ ತಯಾರಿ ಮತ್ತು ಅದನ್ನು ಕಾರ್ಯಗತಗೊಳಿಸಲು ಬಗ್ಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ತಿಳಿಸಿದೆ.
ಇನ್ನೂ ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆಟೋ ಚಾಲಕ ಮತ್ತು ಆರೋಪಿ ಮೊಹ್ಮದ್ ಶಾರಿಕ್ ಇಬ್ಬರು ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಶಾರಿಕ್ ಮತ್ತು ಆತನ ಸಹಚರರು ಕರ್ನಾಟಕದ ಅರಣ್ಯಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ ಸ್ಥಾಪಿಸಲು ಬಯಸಿದ್ದರು ಎಂದು ಎನ್ಐಎಗೆ ತಿಳಿದುಬಂದಿದೆ.
ಅಲ್ಲದೇ ಮಂಗಳೂರು ಸುತ್ತಮುತ್ತಲಿನ ಕಾಡಿನಲ್ಲಿ ಮೊಹ್ಮದ್ ಶಾರಿಕ್ ಮತ್ತು ಆತನ ಸಹಚರರು ಇಸ್ಲಾಮಿಕ್ ಸ್ಟೇಟ್‌ ಕ್ಯಾಂಪುವಿನಲ್ಲಿ ಅಲ್ಲಿ ಮೊಹ್ಮದ್ ಶಾರಿಕ್ ತರಬೇತಿ ಪಡೆದಿದ್ದನು ಎಂದು ಎನ್ಐಎ ಹೇಳಿದೆ.

Leave a Reply